ಬ್ರೇಕಿಂಗ್ ನ್ಯೂಸ್
22-04-25 07:13 pm HK News Desk ದೇಶ - ವಿದೇಶ
ನವದೆಹಲಿ, ಎ.22 : ವಿದೇಶಕ್ಕೆ ಹೋಗಿ ಭಾರತದ ಸಾಂವಿಧಾನಿಕ ಸಂಸ್ಥೆಗಳನ್ನು ಟೀಕಿಸುವ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಮುಂದುವರಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು ಚುನಾವಣಾ ಆಯೋಗ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬೋಸ್ಟನ್ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿ, ‘ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದೊಳಗಿನ ವಯಸ್ಕ ಮತದಾರರ ಸಂಖ್ಯೆಗಿಂತ ಹೆಚ್ಚು ಮತಗಳು ಚಲಾವಣೆಯಾಗಿದ್ದವು. ಚುನಾವಣಾ ಆಯೋಗ ನೀಡಿದ ಮಾಹಿತಿ ಪ್ರಕಾರ ಸಂಜೆ 5.30ರಿಂದ 7.30ರ ನಡುವಿನ ಕೇವಲ 2 ತಾಸಿನ ಅವಧಿಯಲ್ಲಿ 65 ಲಕ್ಷ ಮತಗಳು ಚಲಾವಣೆಯಾಗಿದ್ದವು. ಒಬ್ಬ ಮತದಾರನಿಗೆ ಮತ ಹಾಕಲು ಅಂದಾಜು 3 ನಿಮಿಷಗಳಾದರೂ ಬೇಕು. ಹೀಗೆ ಲೆಕ್ಕ ಹಾಕಿದರೆ, ಮರುದಿನ ನಸುಕಿನ 2 ಗಂಟೆಯವರೆಗೂ ಮತದಾನಕ್ಕೆ ಜನರು ಸರದಿಯಲ್ಲಿ ಇರಬೇಕಿತ್ತು. ಆದರೆ ಹಾಗಾಗಿಲ್ಲ. ಕೇವಲ 2 ತಾಸಿನಲ್ಲಿ 65 ಲಕ್ಷ ಜನ ಮತ ಚಲಾಯಿಸಿದ್ದಾರೆ ಎಂದು ಆಯೋಗ ಹೇಳಿದೆ’ ಎಂದರು.
ಹೀಗಾಗಿ ನಾವು ಸಂದೇಹ ಬಗೆಹರಿಸಿಕೊಳ್ಳಲು ಮತದಾನ ಪ್ರಕ್ರಿಯೆ ವಿಡಿಯೋ ಕೇಳಿದೆವು. ಆಯೋಗ ಅದನ್ನು ಕೊಡಲು ನಿರಾಕರಿಸಿದ್ದಲ್ಲದೆ, ಅದನ್ನು ಕೇಳಲು ಅವಕಾಶವೇ ಇರದಂತೆ ಕಾನೂನನ್ನೇ ಬದಲಿಸಿತು. ಈ ವ್ಯವಸ್ಥೆಯಲ್ಲಿ ಸಮಸ್ಯೆ ಇರುವುದು ಸ್ಪಷ್ಟ. ಚುನಾವಣಾ ಆಯೋಗ ಬಿಜೆಪಿ ಜೊತೆಗೆ ರಾಜಿ ಮಾಡಿಕೊಳ್ಳುತ್ತಿದೆ. ಇದನ್ನು ನಾನು ಅನೇಕ ಬಾರಿ ಹೇಳಿದ್ದೇನೆ ಎಂದು ರಾಹುಲ್ ಆಪಾದಿಸಿದರು. ಅಮೆರಿಕದ ಬ್ರೌನ್ ವಿವಿ ಹಾಗೂ ಇನ್ನೂ ಕೆಲವು ಕಡೆ ಏ.21 ಹಾಗೂ 22ರಂದು ರಾಹುಲ್ ಮಾತನಾಡಲಿದ್ದಾರೆ. ವಿದೇಶದಲ್ಲಿ ನಿಂತು ದೇಶದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಟೀಕಿಸಿ, ರಾಹುಲ್ ಈ ಹಿಂದೆಯೂ ಹಲವು ಬಾರಿ ದೇಶವಾಸಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಹುಲ್ ದ್ರೋಹಿ-ಬಿಜೆಪಿ ಕಿಡಿ
ಚುನಾವಣಾ ಆಯೋಗದ ವಿರುದ್ಧ ರಾಹುಲ್ ಮಾಡಿದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಭಿತ್ ಪಾತ್ರಾ, ‘ವಿದೇಶಿ ನೆಲದಲ್ಲಿ ಭಾರತೀಯ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ಅವಮಾನಿಸಿದ ನೀವು (ರಾಹುಲ್) ಒಬ್ಬ ದೇಶದ್ರೋಹಿ’ ಎಂದು ಕಿಡಿಕಾರಿದ್ದಾರೆ. ‘ನೀವು ಮತ್ತು ನಿಮ್ಮ ತಾಯಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೇಶದ ದುಡ್ಡನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ. ಅದರ ವಿರುದ್ಧ ಜಾರಿ ನಿರ್ದೇಶನಾಲಯ ತೆಗೆದುಕೊಂಡ ಕ್ರಮದಿಂದ ಕೋಪಗೊಂಡು ಹೀಗೆಲ್ಲಾ ಮಾತನಾಡುತ್ತಿದ್ದೀರಿ. ಆದರೂ ನೀವಿಬ್ಬರು ಬಚಾವಾಗಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.
Rahul Gandhi, Congress MP and Leader of the Opposition in the Lok Sabha, during an address to the Indian diaspora in Boston on Sunday raised concerns about the integrity of India’s electoral process, drawing a sharp attack from the ruling BJP.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm