ಬ್ರೇಕಿಂಗ್ ನ್ಯೂಸ್
23-04-25 09:25 pm HK News Desk ದೇಶ - ವಿದೇಶ
ನವದೆಹಲಿ, ಎ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭದ್ರತಾ ವೈಫಲ್ಯ ಕಾರಣವೇ ಎನ್ನುವ ವಿಚಾರ ತೀವ್ರ ಚರ್ಚೆಗೀಡಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಸಾದುದ್ದೀನ್ ಓವೈಸಿ ಗುಪ್ತಚರ ವೈಫಲ್ಯದ ಬಗ್ಗೆ ಬೊಟ್ಟು ಮಾಡಿದ್ದಾರೆ. ಇದೇ ವೇಳೆ, ಗುಪ್ತಚರ ಮೂಲಗಳ ಪ್ರಕಾರ ಪಿಓಕೆ ಕಡೆಯಿಂದ ಭಯೋತ್ಪಾದಕ ದಾಳಿಯಾಗುವ ಸುಳಿವು ಸೇನೆಗೆ ಕೆಲವು ದಿನಗಳ ಹಿಂದೆಯೇ ಲಭಿಸಿತ್ತು ಎಂದು ಹೇಳಲಾಗುತ್ತಿದೆ.
ಗುಪ್ತಚರ ಸಂಸ್ಥೆಯ ಮೂಲಗಳ ಪ್ರಕಾರ, ಘಟನೆಗೆ ಕೆಲವು ದಿನಗಳ ಮುನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡಿದ್ದ. ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ತೋರಿದವು. ಇದು ಭೀಕರ ದುರಂತಕ್ಕೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಈ ಕುರಿತ ಮಾಹಿತಿ ರಾಜ್ಯ ಸರ್ಕಾರಕ್ಕೆ ಹೋಗಿತ್ತೇ, ಸೇನೆಗೂ ಲಭಿಸಿತ್ತೇ ಎನ್ನುವ ಮಾಹಿತಿ ಇಲ್ಲ.
ಅಲ್ಲದೆ, ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ಅಂತರರಾಷ್ಟ್ರೀಯ ಕಮಾಂಡರ್ಗಳು ಘಟನೆ ವೇಳೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು. ದಾಳಿಯಲ್ಲಿ ಭಾಗಿಯಾಗಿರುವ ಉಗ್ರಗಾಮಿಗಳು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜನಪ್ರಿಯ ಪ್ರವಾಸಿ ತಾಣಗಳಾಗಿದ್ದರೂ ಭದ್ರತಾ ಪಡೆಗಳನ್ನು ಕಡಿಮೆ ಸಂಖ್ಯೆಯಲ್ಲಿ ನಿಯೋಜಿಸಿರುವ ಬಗ್ಗೆ ವರದಿಗಳು ಉಗ್ರರಿಗೆ ಹೋಗಿದ್ದವು ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ದಾಳಿಕೋರರು ಹೆಲ್ಮೆಟ್ ನಲ್ಲಿ ಅಳವಡಿಸಲಾದ ಕ್ಯಾಮೆರಾಗಳನ್ನು ಹೊಂದಿದ್ದರು. ಇದು ಪ್ರವಾಸಿಗರ ಹತ್ಯಾಕಾಂಡವನ್ನು ರೆಕಾರ್ಡ್ ಮಾಡಲು ಮತ್ತು ದೃಶ್ಯಾವಳಿಗಳನ್ನು ಭಯೋತ್ಪಾದಕ ಅಂಗ ಸಂಸ್ಥೆಗಳಿಗೆ ರವಾನಿಸಲು ಉದ್ದೇಶಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬುಧವಾರ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರೆಂದು ಶಂಕಿಸಲಾಗಿರುವ ಮೂವರು ಪುರುಷರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ.
ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಇವರನ್ನು ಗುರುತಿಸಲಾಗಿದ್ದು, ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಸಂಕೇತ ನಾಮಗಳನ್ನು ಹೊಂದಿದ್ದಾರೆ. ಅಧಿಕಾರಿಗಳ ಪ್ರಕಾರ, ಅವರು ಪೂಂಛ್ ನಲ್ಲಿ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಅಂಗ ಸಂಸ್ಥೆ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಮಂಗಳವಾರ ಮಧ್ಯಾಹ್ನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.
A day after the deadly terror attack in Pahalgam that killed at least 26 people, fresh intelligence inputs have revealed 42 active terrorist launch pads in Pakistan-occupied Kashmir (Pok) near the Line of Control (Loc). These bases are believed to house an estimated 110 to 130 terrorists, with 115 of them identified as Pakistani nationals, officials said.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am