ಬ್ರೇಕಿಂಗ್ ನ್ಯೂಸ್
26-04-25 04:36 pm HK News Desk ದೇಶ - ವಿದೇಶ
ನವದೆಹಲಿ, ಎ.26 : ಪಹಲ್ಗಾಮ್ ಭಯೋತ್ಪಾದಕ ಕೃತ್ಯದ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸ್ವತಃ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ತಪ್ಪು ಮಾಡಿದ್ದೇವೆಂದು ತಪ್ಪೊಪ್ಪಿಗೆ ಮಾತು ಹೇಳಿದ್ದಾರೆ. ಬ್ರಿಟನ್ ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಖವಾಜಾ ಆಸಿಫ್, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಅವರ ಕೃತ್ಯಗಳಿಗೆ ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂದು ಒಪ್ಪಿಕೊಂಡಿದ್ದಾರೆ. ನಾವು 30 ವರ್ಷಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಲಷ್ಕರ್-ಎ-ತೊಯ್ಬಾ ಉಗ್ರವಾದಿ ಸಂಘಟನೆ ಈ ಹಿಂದೆ ಪಾಕಿಸ್ತಾನದೊಂದಿಗೆ ಕೆಲವು ಸಂಪರ್ಕಗಳನ್ನು ಹೊಂದಿತ್ತು ಎಂದು ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರಲ್ಲದೆ, ಈಗ ಈ ಭಯೋತ್ಪಾದಕ ಸಂಘಟನೆ ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ. ಆದರೆ ಪಾಕಿಸ್ತಾನದಲ್ಲಿ ಲಷ್ಕರ್ ನಂಟು ಇದೆಯೆಂಬ ಮಾತ್ರಕ್ಕೆ ನಾವು ಅದಕ್ಕೆ ಸಹಾಯ ಮಾಡುತ್ತೇವೆ ಎಂದರ್ಥವಲ್ಲ ಎಂದು ಅವರು ಹೇಳಿದರು.
ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಲಷ್ಕರ್ ಅಂಗ ಸಂಸ್ಥೆ ವಹಿಸಿಕೊಂಡಿದೆಯಲ್ವಾ ಎಂಬ ಪ್ರಶ್ನೆಗೆ, ಮಾತೃಸಂಸ್ಥೆಯೇ ಅಸ್ತಿತ್ವದಲ್ಲಿಲ್ಲ. ಇನ್ನು ಶಾಖೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು. ಏಪ್ರಿಲ್ 22ರಂದು ಭಯೋತ್ಪಾದಕರು 26 ಅಮಾಯಕ ಪ್ರವಾಸಿಗರನ್ನು ಕೊಂದ ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಲಷ್ಕರ್ ಅಂಗ ಸಂಸ್ಥೆ ಟಿಆರ್ಎಫ್ ವಹಿಸಿಕೊಂಡಿತ್ತು.
ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಾ ಬಂದಿದೆಯಲ್ವಾ ಎಂದು ಪತ್ರಕರ್ತ ಪ್ರಶ್ನಿಸಿದ್ದಕ್ಕೆ ಸಚಿವ ಖವಾಜಾ ಆಸಿಫ್ ಅದನ್ನು ಒಪ್ಪಿಕೊಂಡಿದ್ದಾರೆ. ನಾವು ಮೂರು ದಶಕಗಳಿಂದ ಅಮೆರಿಕ ಸಂಯುಕ್ತ ಸಂಸ್ಥಾನಕ್ಕಾಗಿ ಮತ್ತು ಬ್ರಿಟನ್ಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತ ಬಂದಿದ್ದೇವೆ ಎಂದವರು ಹೇಳಿದರು. ನಮ್ಮ ಈ ತಪ್ಪು ನಡೆಯಿಂದಾಗಿ ಭಾರೀ ನಷ್ಟವನ್ನೂ ಅನುಭವಿಸಿದ್ದೇವೆ ಎಂದು ಖ್ವಾಜಾ ಆಸಿಫ್ ಹೇಳಿದ್ದಾರೆ. ಆಮೂಲಕ ಭಾರತದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
In a groundbreaking admission, Pakistan has publicly acknowledged its historical complicity in supporting terrorist organizations over the past three decades. This revelation marks a significant shift in the nation’s narrative regarding its role in regional and global terrorism, as officials affirm a commitment to rectifying past mistakes.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm