ಬ್ರೇಕಿಂಗ್ ನ್ಯೂಸ್
27-04-25 06:35 pm HK News Desk ದೇಶ - ವಿದೇಶ
ಶ್ರೀನಗರ, ಎ.27 : ಭಯೋತ್ಪಾದಕ ಕೃತ್ಯ ಹಿನ್ನೆಲೆಯಲ್ಲಿ ಭಾರತ – ಪಾಕಿಸ್ಥಾನ ನಡುವೆ ಯುದ್ಧ ಕಾರ್ಮೋಡ ಕವಿದಿದೆ. ಇದಕ್ಕೆ ಇಂಬು ನೀಡುವಂತೆ ಬಿಎಸ್ಎಫ್ ಯೋಧರು ಗಡಿಭಾಗದಲ್ಲಿರುವ ರೈತರನ್ನು ತಮ್ಮ ಜಮೀನು ಬಿಟ್ಟು ದೂರ ಹೋಗುವಂತೆ ಸಲಹೆ ಮಾಡಿದ್ದಾರೆ. 48 ಗಂಟೆ ಒಳಗಡೆ ಎಲ್ಲವನ್ನೂ ಬಿಟ್ಟು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.
ಪಾಕಿಸ್ತಾನ ಗಡಿಭಾಗದ ಜಿಲ್ಲೆಗಳಾದ ಪಂಜಾಬ್ ರಾಜ್ಯದ ಅಮೃತಸರ, ತರಣ್ ತಾರಣ್, ಫಿರೋಜ್ ಪುರ, ಫಾಜಿಲ್ಕಾ ಪ್ರದೇಶದ ಸ್ಥಳೀಯ ಗುರುದ್ವಾರಗಳಲ್ಲಿ ಈ ಬಗ್ಗೆ ಪ್ರಕಟಣೆ ನೀಡಲಾಗುತ್ತಿದ್ದು, ಎರಡು ದಿನಗಳಲ್ಲಿ ಜಾಗ ಬಿಟ್ಟು ಹೋಗದಿದ್ದಲ್ಲಿ ಜನರ ಸಂಚಾರ ಬಂದ್ ಮಾಡಲಾಗುವುದು. ಈ ಪ್ರದೇಶದಲ್ಲಿ ಜನ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸಸ್ಪೆಂಡ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗಡಿ ಪ್ರದೇಶದ 45 ಸಾವಿರ ಎಕ್ರೆ ಕೃಷಿ ಜಮೀನಿನಲ್ಲಿ ಜನರನ್ನು ತೆರವು ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಪೂರ್ತಿಯಾಗಿ ನಿರ್ಜನ ಪ್ರದೇಶ ಎಂದು ಗುರುತಿಸಲಾಗುವುದು. ಗೋಧಿ, ಹತ್ತಿ ಬೆಳೆಗಳನ್ನು ಬೆಳೆಸುತ್ತಿದ್ದ ಈ ಜಾಗದಲ್ಲಿ ಸೇನಾ ಪಡೆಗಳನ್ನು ನಿಯೋಜನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ- ಪಾಕಿಸ್ತಾನ ನಡುವೆ 530 ಕಿಮೀ ಉದ್ದಕ್ಕೆ ಗಡಿಭಾಗವಿದ್ದು, ಇಲ್ಲಿನ ಜನರು ಮೊದಲಿನಿಂದಲೂ ಸೇನಾ ನಿರ್ಬಂಧಗಳ ನಡುವೆಯೇ ಬದುಕುತ್ತಿದ್ದರು. ಭಯೋತ್ಪಾದಕ ದಾಳಿಯ ನಂತರ ಮತ್ತೆ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು ಜನರು ಜಾಗ ಖಾಲಿ ಮಾಡಿ ಇನ್ನೆಲ್ಲೋ ಬದುಕುವ ಸ್ಥಿತಿಗೆ ಒಳಗಾಗಿದ್ದಾರೆ. ಇದೇ ವೇಳೆ, ಪಾಕಿಸ್ಥಾನ ಗಡಿಯಾಚೆಯಲ್ಲಿ ಜನರು ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಇದೇ ವೇಳೆ, ಪಹಲ್ಗಾಮ್ ಭಯೋತ್ಪಾದಕ ಕೃತ್ಯದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಎತ್ತಿಕೊಂಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಬಿಎಸ್ಎಫ್ ಯೋಧರು ಉಗ್ರರಿಗೆ ಬೆಂಬಲ ನೀಡುತ್ತಿರುವ ಜನರನ್ನು ಗುರುತಿಸಿ ಅವರ ಮನೆಗಳನ್ನು ನೆಲಸಮಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಇದೇ ವೇಳೆ, ಸೇನಾ ಕಾರ್ಯಾಚರಣೆ ಸೇರಿದಂತೆ ಯಾವುದನ್ನೂ ನೇರ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಅಲ್ಲದೆ, ಊಹಾಪೋಹದ ಸುದ್ದಿಗಳನ್ನು ಹರಡದಂತೆಯೂ ಸೂಚನೆ ನೀಡಲಾಗಿದೆ. ಯುದ್ಧ ಇನ್ನಿತರ ಸೇನಾ ಕಾರ್ಯಾಚರಣೆಯ ನೇರ ಪ್ರಸಾರದಿಂದ ಜನರ ಮೇಲೆ ನೇತ್ಯಾತ್ಮಕ ಪರಿಣಾಮಗಳಾಗುತ್ತವೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ.
The Border Security Force (BSF) on Saturday issued an urgent directive to farmers along the India-Pakistan border to complete harvesting and clear their fields within 48 hours, as tensions escalate following the Pahalgam terror attack that killed 26 tourists last week.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm