ಬ್ರೇಕಿಂಗ್ ನ್ಯೂಸ್
29-04-25 03:45 pm HK News Desk ದೇಶ - ವಿದೇಶ
ನವದೆಹಲಿ, ಏ 29 : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕಾಂಗ್ರೆಸ್ ಹಂಚಿಕೊಂಡಿರುವ ಪೋಸ್ಟರ್ ಇದೀಗ ವಿವಾದಕ್ಕೆ ಕಾರಣವಾಗಿದೆ.
‘ಬಂಧ್ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಈ ಪೋಸ್ಟ್ ವಿವಾದವನ್ನು ಸೃಷ್ಟಿಸಿದೆ.

ಕಾಂಗ್ರೆಸ್ ಮಾಡಿರುವ ಈ ಪೋಸ್ಟ್'ನ್ನು ಪಾಕಿಸ್ತಾನದ ಮಾಜಿ ಸಚಿವ ಶೇರ್ ಮಾಡಿದ್ದು, ‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದಾರೆ. ಅಲ್ಲದೆ, ಹ್ಯಾಷ್ ಟ್ಯಾಗ್ ನಲ್ಲಿ ನಾಟಿ ಕಾಂಗ್ರೆಸ್ ಎಂದು ಪೋಸ್ಟ್ ಮಾಡಿದ್ದಾರೆ. ಈ ಬೆಳವಣಿಗೆ ಬಿಜೆಪಿ ಹಾಗೂ ಜನರನ್ನು ಸಿಟ್ಟಿಗೇಳುವಂತೆ ಮಾಡಿದೆ.
ಕಾಂಗ್ರೆಸ್ ಪೋಸ್ಟ್ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ಕೆಲ ನಾಯಕರನ್ನು ಒಟ್ಟಿಗೆ ಸೇರಿಸಿ, ಕಾಂಗ್ರೆಸ್ ಕೇ ಹಾತ್, ಪಾಕಿಸ್ತಾನ್ ಕೆ ಸಾಥ್ (ಕಾಂಗ್ರೆಸ್ ಕೈ ಪಾಕಿಸ್ತಾನದ ಜೊತೆಗೆ) ಎಂದು ಪೋಸ್ಟ್ ಮಾಡಿ, ತಿರುಗೇಟು ನೀಡಿದೆ.

ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಂತೆ ಮಾತನಾಡುವುದಲ್ಲದೆ, ಅವರ ಕಾರ್ಯ ಸಂಸ್ಕೃತಿ ಮತ್ತು ಪದ್ಧತಿಗಳು ಇಸ್ಲಾಮಾಬಾದ್ನಂತೆಯೇ ಇವೆ ಎಂದು ಟೀಕಿಸಿದೆ.
‘ಕಾಂಗ್ರೆಸ್ ಪಕ್ಷವು ಪ್ರಧಾನಿ ಮೋದಿಯವರ ತಲೆ ಕಾಣೆಯಾಗಿರುವ ಚಿತ್ರವನ್ನು ಹಂಚಿಕೊಂಡಿದೆ. ಇದು ಪಾಕಿಸ್ತಾನಿ ರಾಯಭಾರಿ ಭಾರತೀಯರ ಮೇಲೆ ಕತ್ತು ಸೀಳುವುದಾಗಿ ಮಾಡಿರುವ ಸನ್ಹೆಯಂತೆ ಇದೆ. ಕಾಂಗ್ರೆಸ್ ಪಾಕಿಸ್ತಾನಿಗಳ ಭಾಷೆಯಲ್ಲಿ ಮಾತನಾಡುತ್ತಿದೆ ಮತ್ತು ಭಯೋತ್ಪಾದಕರಂತೆ ವರ್ತಿಸುತ್ತಿದೆ’ ಎಂದು ಟೀಕಿಸಿದೆ.
ರಾಜ್ಯ ಬಿಜೆಪಿ ಪೋಸ್ಟ್ ಮಾಡಿ, ಕರ್ನಾಟಕದ ಕಾಂಗ್ರೆಸ್ ನಾಯಕರು ಪಾಕಿಸ್ಥಾನದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಅವಕಾಶ ಲಭಿಸಿದರೆ ಪಾಕಿಸ್ಥಾನದ ರಾಜಕೀಯದಲ್ಲೂ ಮಿಂಚಬಹುದೇನೋ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಒಬ್ಬರಿಗೆ ಯುದ್ಧ ಬೇಡವಂತೆ, ಮತ್ತೊಬ್ಬರಿಗೆ ಪಾಕಿಸ್ಥಾನ ಮಿತ್ರರಾಷ್ಟ್ರವಂತೆ, ಇನ್ನೊಬ್ಬರು ಉಗ್ರರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ತುಂಡು ಮತಗಳಿಗಾಗಿ ಪಾಕಿಸ್ಥಾನ ಪ್ರೇರಿತ ಉಗ್ರವಾದವನ್ನು ಸಮರ್ಥಿಸುವುದಾದರೆ ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವ ವ್ಯತ್ಯಾಸವಿದೆ? ಎಂದು ಪ್ರಶ್ನಿಸಿದೆ.
ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿ, ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಸ್ಲೀಪರ್ ಸೆಲ್ಗಳಂತೆ ವರ್ತಿಸುತ್ತಿದ್ದಾರೆ. ಅವರ ಬೇಜವಾಬ್ದಾರಿ ಮತ್ತು ಖಂಡನೀಯ ಹೇಳಿಕೆಗಳನ್ನು ಸಂತ್ರಸ್ತ ಕುಟುಂಬಗಳಿಗೆ ಸಾವಿನಲ್ಲೂ ಘನತೆಯನ್ನು ನಿರಾಕರಿಸುವಷ್ಟು ದೂರ ಹೋಗಿದೆ. ಉಗ್ರರ ಹತ್ಯೆಗಳಿಗೆ ಅಪಾರ ಸಾಕ್ಷ್ಯಗಳಿವೆ. ಪ್ರತ್ಯಕ್ಷದರ್ಶಿಗಳಿಂದ ಬಂದ ನೇರ ಹೇಳಿಕೆಗಳ ಹೊರತಾಗಿಯೂ, ಕಾಂಗ್ರೆಸ್ ಉಷ್ಟ್ರಪಕ್ಷಿಯಂತೆ ಮರಳಿನಲ್ಲಿ ತನ್ನ ತಲೆಯನ್ನು ಹೂತುಹಾಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
After the Congress posted an image of a bandhgala kurta, churidar pyjama and a black footwear and the caption “at the time of responsibility – Gayab” in Hindi, the BJP said this was not merely a political statement.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm