ಬ್ರೇಕಿಂಗ್ ನ್ಯೂಸ್
10-05-25 09:24 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಭಾರತ- ಪಾಕಿಸ್ತಾನ ಸೇನಾ ಸಂಘರ್ಷ ಕೊನೆಗೊಳಿಸುವ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಭಾರತೀಯ ಸೇನೆ ಪರವಾಗಿ ಕರ್ನಲ್ ಸೋಫಿಯಾ ಖುರೇಷಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಭಾರತದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್ ಕ್ಷಿಪಣಿಗೆ ಹಾನಿಯಾಗಿದೆ ಎಂದು ಪಾಕಿಸ್ತಾನ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಜೆಎಫ್-17 ಫೈಟರ್ ಜೆಟ್ ಮೂಲಕ ಹಾನಿ ಮಾಡಿದ್ದೇವೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ತಿಳಿಸಿದ್ದಾರೆ.
ಇದಲ್ಲದೆ, ನಮ್ಮ ಸೇನಾ ನೆಲೆಗಳಾದ ಸಿರ್ಸಾ, ಜಮ್ಮು, ಪಠಾಣ್ ಕೋಟ್, ಭತಿಂಡಾ, ನಾಲಿಯಾ ಮತ್ತು ಭುಜ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಅಂತಹ ಯಾವುದೇ ಘಟನೆ ಆಗಿಲ್ಲ. ಮೂರನೇಯದಾಗಿ ನಮ್ಮ ಶಸ್ತ್ರಾಗಾರ ಇರುವ ಚಂಡೀಗಢ ಮತ್ತು ವ್ಯಾಸ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಇದೇ ವೇಳೆ, ಭಾರತೀಯ ಸೇನೆಯು ಮಸೀದಿಗಳನ್ನು ಡ್ಯಾಮೇಜ್ ಮಾಡಿದೆ ಎಂಬುದಾಗಿಯೂ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ನಾನು ಈ ಬಗ್ಗೆ ಸ್ಪಷ್ಟನೆ ನೀಡುವುದೇನಂದರೆ, ಭಾರತವು ಜಾತ್ಯತೀತ ದೇಶವಾಗಿದ್ದು, ನಮ್ಮ ಸೇನೆಯು ದೇಶದ ಸಂವಿಧಾನದ ಮೌಲ್ಯಗಳನ್ನು ಅಷ್ಟೇ ಸುಂದರವಾಗಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಶನ್ ಸಿಂಧೂರ್ ಹೆಸರಲ್ಲಿ ಪಾಕಿಸ್ತಾನದ ಒಂಬತ್ತು ಕಡೆ ಉಗ್ರವಾದಿ ಶಿಬಿರಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನವು ಸುಳ್ಳು ಸುದ್ದಿ ಹಬ್ಬಿಸುತ್ತ ತನ್ನ ಸೇನೆಯೂ ಭಾರತದ ಡ್ರೋಣ್ ಗಳನ್ನು, ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿದ್ದಾಗಿ ಸುಳ್ಳು ಮಾಹಿತಿ ನೀಡಿತ್ತು. ಆದರೆ ಅದಕ್ಕೆ ಯಾವುದೇ ಸಾಕ್ಷಿ ನೀಡಲು ವಿಫಲವಾಗಿತ್ತು.
Addressing the press briefing following the announcement of the India-Pakistan ceasefire, the Indian Armed Forces on Saturday exposed Pakistan's misinformation campaign and false narratives it peddled during the recent conflict. Colonel Sofiya Qureshi termed Pakistani claims that India's S-400 and BrahMos missile bases were destroyed by Pakistan Air Force's JF-17 "completely wrong". She said Pakistan "ran a misinformation campaign that our airfields in Sirsa, Jammu, Pathankot, Bhatinda, Nalia and Bhuj were damaged, and its misinformation is also completely wrong."
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm