ಬ್ರೇಕಿಂಗ್ ನ್ಯೂಸ್
19-05-25 01:46 pm HK News Desk ದೇಶ - ವಿದೇಶ
ಹೈದರಾಬಾದ್, ಮೇ 19 : ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಆಭರಣ ಅಂಗಡಿಯಲ್ಲಿ ಭಾನುವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 8 ಮಕ್ಕಳು ಸೇರಿ ಒಟ್ಟು 17 ಮಂದಿ ಸಾವನಪ್ಪಿದ್ದಾರೆ.
ಗಾಯಗೊಂಡವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.
ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಗುಲ್ಜಾರ್ ಹೌಸ್‌ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದರು.
ಪ್ರಧಾನಿ ಪರಿಹಾರ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ. ಘಟನೆಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ.
As many as 17 people were killed in a massive fire that broke out near Charminar in Hyderabad in the early hours of Sunday. “All 17 people died of asphyxiation,” said a senior police officer who was part of the rescue operation. While eight had suffered burn injuries, the main cause of death was inhalation of smoke, officials said.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm