ಬ್ರೇಕಿಂಗ್ ನ್ಯೂಸ್
22-05-25 05:43 pm HK News Desk ದೇಶ - ವಿದೇಶ
ನವದೆಹಲಿ, ಮೇ 22 : 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ದೆಹಲಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಈ ನಿಯೋಗದಲ್ಲಿದ್ದಾರೆ. ಈ ನಿಯೋಗವು ಮೊದಲು ರಷ್ಯಾ ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ (ಮೇ 25), ಗ್ರೀಸ್ (ಮೇ 27), ಲಾಟ್ವಿಯಾ (ಮೇ 29) ಮತ್ತು ಸ್ಪೇನ್ಗೂ (ಮೇ 31) ಭೇಟಿ ನೀಡಲಿದ್ದಾರೆ. ಇದಲ್ಲದೆ, ಶಶಿ ತರೂರ್ ಸೇರಿ ಏಳು ಸಂಸದರ ನೇತೃತ್ವದಲ್ಲಿ ಪ್ರತ್ಯೇಕ ಏಳು ತಂಡಗಳು ಜಗತ್ತಿನ ವಿವಿಧ ದೇಶಗಳಿಗೆ ಹೊರಟಿದೆ.
ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮದ ಜತೆಗೆ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ, " ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ ಭಯೋತ್ಪಾದನೆ ವಿರುದ್ಧ ಅದರಲ್ಲೂ ನಿರ್ದಿಷ್ಟವಾಗಿ ಪಾಕಿಸ್ತಾನ ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿರುವುದು ಹಾಗು ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ.
ಪ್ರಧಾನಮಂತ್ರಿ ಮೋದಿ ಅವರ ಸಂದೇಶದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲ, ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ನಮ್ಮ ಸರ್ವಪಕ್ಷ ನಿಯೋಗವು ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕತೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ" ಎಂದು ಹೇಳಿದ್ದಾರೆ.
Seven Party Delegation Leaves for Abroad, Proud to Convey India’s Message to the World says Mangalore MP Brijesh Chowta.
22-05-25 09:07 pm
Bangalore Correspondent
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
Bagalkot, Monkey Visits Animal Hospital: ಬಾಗಲ...
22-05-25 12:41 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm