ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm