ಬ್ರೇಕಿಂಗ್ ನ್ಯೂಸ್
22-06-25 04:49 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 22: ಪಹಲ್ಗಾಮ್ ಭಯೋತ್ಪಾದಕ ದಾಳಿ ಕೃತ್ಯದಲ್ಲಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಯುವಕರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪರ್ವೈಜ್ ಅಹ್ಮದ್ ಜೋಥಾರ್ ಮತ್ತು ಬಶೀರ್ ಅಹ್ಮದ್ ಜೋಥಾರ್ ಬಂಧಿತರು ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.
ಕೃತ್ಯದಲ್ಲಿ ಪಾಲ್ಗೊಂಡಿದ್ದ ಮೂವರು ಉಗ್ರರ ಗುರುತು ಹೇಳಿರುವ ಈ ಇಬ್ಬರು ಯುವಕರು, ಅವರು ಪಾಕಿಸ್ತಾನಿಗಳು ಮತ್ತು ಲಷ್ಕರ್ ಇ-ತೊಯ್ಬಾ ಸಂಘಟನೆಯ ಉಗ್ರರು ಎಂದು ಮಾಹಿತಿ ನೀಡಿದ್ದಾರೆ. ಈ ಮೂವರು ಉಗ್ರರಿಗೆ ಪರ್ವೈಜ್ ಮತ್ತು ಬಶೀರ್ ದಾಳಿಗೂ ಮುನ್ನ ಹಿಲ್ ಪಾರ್ಕ್ ಏರಿಯಾದಲ್ಲಿ ಆಶ್ರಯ ನೀಡಿದ್ದರು. ಆಹಾರ, ಉಳಿಯುವುದಕ್ಕೆ ವ್ಯವಸ್ಥೆ ಮತ್ತು ಶಸ್ತ್ರಾಸ್ತ್ರ ಬಚ್ಚಿಟ್ಟುಕೊಳ್ಳುವುದಕ್ಕೆ ಬೆಂಬಲ ನೀಡಿದ್ದರು. ಬಂಧಿತ ಇಬ್ಬರು ಯುವಕರ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು ದಾಖಲಿಸಿದೆ.
ಎನ್ಐಎ ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ 32 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಕಾರ್ಯಾಚರಣೆ ಮುಂದುವರಿದಿದ್ದು, ಖಚಿತ ಮಾಹಿತಿ ಆಧರಿಸಿ ಇಬ್ಬರು ಯುವಕರನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದೆ. ದಿ ರೆಸಿಸ್ಟೆಂಟ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಕಾಶ್ಮೀರ್ (ಯುಎಲ್ಎಫ್), ಮುಜಾಹಿದೀನ್ ಗಜ್ವಾತ್ ಉಲ್ ಹಿಂದ್ (ಎಂಜಿಎಚ್), ಜಮ್ಮು ಅಂಡ್ ಕಾಶ್ಮೀರ್ ಫ್ರೀಡಂ ಫೈಟರ್ಸ್ (ಜೆಕೆಎಫ್ಎಫ್) ಸಂಘಟನೆಗಳಲ್ಲಿ ಗುರುತಿಸಿಕೊಂಡ ಜನರ ಮನೆ, ಕಚೇರಿಗಳಿಗೆ ಎನ್ಐಎ ದಾಳಿ ನಡೆಸಿತ್ತು. ಈ ಸಂಘಟನೆಗಳ ಸದಸ್ಯರು ನಿಷೇಧಿತ ಲಷ್ಕರ್ ಇ-ತೈಬಾ, ಜೈಶ್ ಇ-ಮಹಮ್ಮದ್ ಮತ್ತು ಅಲ್ ಬದ್ರ್ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿಕೆಯಲ್ಲಿ ಎನ್ಐಎ ತಿಳಿಸಿದೆ.
ಕಳೆದ ಎಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸಾರಣ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರಿದ್ದ ಸಂದರ್ಭದಲ್ಲಿ ಐದಾರು ಮಂದಿಯಿದ್ದ ಶಸ್ತ್ರಸಜ್ಜಿತ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಘಟನೆಯಲ್ಲಿ 26 ಮಂದಿ ಬಲಿಯಾಗಿದ್ದರು. ಮಿನಿ ಸ್ವಿಜರ್ಲ್ಯಾಂಡ್ ಎಂದು ಬಣ್ಣಿತವಾಗಿರುವ ಬೈಸಾರಣ್ ಪ್ರದೇಶದಲ್ಲಿ ಪ್ರವಾಸಿಗರು ಬೀಡು ಬಿಟ್ಟಿದ್ದಾಗಲೇ ಏಕಾಏಕಿ ಈ ದಾಳಿ ನಡೆದಿತ್ತು.
In a major breakthrough, the National Investigation Agency (NIA) has arrested two men for harbouring the terrorists who had carried out the Pahalgam terror attack that left 26 people dead, the agency said on Sunday.According to the NIA, the two men Parvaiz Ahmad Jothar from Batkote and Bashir Ahmad Jothar of Hill Park in Pahalgam have disclosed the identities of the three armed terrorists involved in the attack.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm