ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm