ಬ್ರೇಕಿಂಗ್ ನ್ಯೂಸ್
05-08-25 03:23 pm HK News Desk ದೇಶ - ವಿದೇಶ
ನವದೆಹಲಿ, ಆ.5 :ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್(79) ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಸತ್ಯಪಾಲ ಮಲಿಕ್ ಅವರು 2018ರ ಆಗಸ್ಟ್ ತಿಂಗಳಿನಿಂದ 2019ರ ಅಕ್ಟೋಬರ್ ತನಕ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಒಂದರ್ಥದಲ್ಲಿ ಅವರು ಜಮ್ಮು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾಗಿದ್ದರು. ಇವರು ರಾಜ್ಯಪಾಲರಾಗಿದ್ದ ಅವಧಿಯಲ್ಲೇ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಜಮ್ಮು ಕಾಶ್ಮೀರದ ರಾಜ್ಯಪಾಲ ಹುದ್ದೆಯ ಬಳಿಕ ಅವರು ಗೋವಾ, ಆ ಬಳಿಕ ಮಣಿಪುರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರದ ರಾಜ್ಯಪಾಲರಾಗುವ ಮೊದಲು ಬಿಹಾರ ರಾಜ್ಯಪಾಲರಾಗಿದ್ದು ಆ ವೇಳೆ ಒಡಿಶಾದ ಹೆಚ್ಚುವರಿ ಜವಾಬ್ದಾರಿಯೂ ಇವರಿಗೆ ಲಭಿಸಿತ್ತು.
ರಾಜಕಾರಣಿಯಾಗಿ ಸತ್ಯಪಾಲ ಮಲಿಕ್ ಅವರು 1974–77ರ ಅವಧಿಯಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾಗಿದ್ದರು. ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದ ಸದಸ್ಯರಾಗಿ ಚುನಾವಣೆಯಲ್ಲಿ ಗೆದ್ದಿದ್ದರು. ನಂತರ, ಭಾರತೀಯ ಲೋಕದಳ ರಚನೆಯ ನಂತರ ಲೋಕದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1980ರಿಂದ 1986 ಮತ್ತು 1986–89ರ ವರೆಗೆ ರಾಜ್ಯಸಭೆಯಲ್ಲಿ ಉತ್ತರ ಪ್ರದೇಶವನ್ನು ಪ್ರತಿನಿಧಿಸಿದ್ದರು.
1989ರಿಂದ 1991ರವರೆಗೆ ಜನತಾ ದಳದ ಸದಸ್ಯರಾಗಿ ಅಲಿಗಢದಿಂದ 9ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 1996ರಲ್ಲಿ ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರು. ನಂತರ ಬಿಜೆಪಿ ಸೇರಿ, 2012ರಲ್ಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. 2020– 2021ರಲ್ಲಿ ಜಾಗತಿಕ ಜಾಟ್ ಶೃಂಗಸಭೆಯಲ್ಲಿ ಭಾರತೀಯ ರೈತರ ಪ್ರತಿಭಟನೆಯ ಬಗ್ಗೆ ಭಾರತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ವಿವಾದಕ್ಕೆ ಈಡಾಗಿತ್ತು. ಏಪ್ರಿಲ್ 14, 2023ರಂದು ಪತ್ರಕರ್ತ ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ ಪುಲ್ವಾಮಾ ದಾಳಿಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Satyapal Malik, 79, former Jammu and Kashmir governor passed away at Delhi’s Ram Manohar Lohia Hospital after a prolonged illness, his personal secretary KS Rana confirmed on Tuesday. Malik had been undergoing treatment for kidney-related complications.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm