ಬ್ರೇಕಿಂಗ್ ನ್ಯೂಸ್
05-08-25 09:33 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಅಬ್ಬರಕ್ಕೆ ಇಡೀ ಗ್ರಾಮಕ್ಕೆ ಗ್ರಾಮವೇ ನಾಶಕ್ಕೀಡಾಗಿದೆ. ಅತಿ ಎತ್ತರದ ಪ್ರದೇಶದಲ್ಲಿ ಉಂಟಾದ ಭಾರೀ ಪ್ರವಾಹಕ್ಕೆ ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಎಸ್‌ಡಿಆರ್‌ಎಫ್ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸ್ಥಳೀಯ ಆಡಳಿತ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಉತ್ತರ ಕಾಶಿಯಲ್ಲಿ 40-50 ಮನೆಗಳು ಕೊಚ್ಚಿಕೊಂಡು ಹೋಗಿವೆ. 50ಕ್ಕು ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ. ಹರ್ಸಿಲ್ ನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪ್ರವಾಹ, ಭೂಕುಸಿತ ಸಂಭವಿಸಿದೆ. ಸ್ಥಳಕ್ಕೆ ಮೂರು ಎನ್ ಡಿಆರ್ ಎಫ್ ತಂಡಗಳನ್ನು ಕಳುಹಿಸಲಾಗಿದೆ ಎಂದು ಎನ್ ಡಿಆರ್ ಎಫ್ ಡಿಐಜಿ ಮೊಹ್ಸೀನ್ ಶಾಹಿದ್ ತಿಳಿಸಿದ್ದಾರೆ. ಉತ್ತರಕಾಶಿ, ಧಾರಾಲಿ ಮತ್ತು ಸುಖಿ ಏರಿಯಾದಲ್ಲಿ ಒಂದೇ ದಿನ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಆಸುಪಾಸಿನ ರಸ್ತೆಗಳು, ವಾಹನಗಳು ಕೊಚ್ಚಿ ಹೋಗಿವೆ. ಅಲ್ಲದೆ, ಬೆಟ್ಟದ ಮೇಲ್ಬಾಗದಲ್ಲಿ ಹಲವಾರು ಮನೆಗಳು ಪ್ರವಾಹದಲ್ಲಿ ಸಿಲುಕಿ ಕೊಚ್ಚಿ ಹೋಗಿವೆ. ಖೀರ್ ನದಿಯಲ್ಲಿ ಪ್ರವಾಹ ಉಂಟಾಗಿ ಎತ್ತರದ ನಗರ ಪ್ರದೇಶದಲ್ಲಿ ಧುಮ್ಮಿಕ್ಕಿ ಹರಿಯುವುದು, ಜನರು ಕೊಚ್ಚಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್ ಆಗಿದೆ. 2013ರಲ್ಲಿ ಉತ್ತರಾಖಂಡದಲ್ಲಿ ಎದುರಾಗಿದ್ದ ಪ್ರವಾಹ ದುರಂತವನ್ನೂ ಮೀರಿಸುವಷ್ಟು ನಾಶ ನಷ್ಟ ಆಗಿದೆ ಎಂದು ತೇಹ್ರಿ ಘರ್ ವಾಲ್ ಸಂಸದೆ ಮಾಲಾ ರಾಜ್ಯ ಲಕ್ಷ್ಮಿ ಹೇಳಿದ್ದಾರೆ.
A powerful cloudburst struck Dharali village in Uttarkashi district on Tuesday afternoon, unleashing a massive landslide and flooding that have caused extensive destruction and killing at least four people. The village, located about 4 kilometers from the Indian Army camp at Harsil, was hit around 1:45 pm, with a torrent of water and debris cutting off all road connectivity to the Gangotri Dham.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm