ಬ್ರೇಕಿಂಗ್ ನ್ಯೂಸ್
13-08-25 10:41 am HK News Desk ದೇಶ - ವಿದೇಶ
ಜೈಪುರ, ಆ.13 : ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾತ್ರಾರ್ಥಿಗಳಿದ್ದ ಪಿಕ್ ಅಪ್ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಡಿದು ಅಪಘಾತ ಉಂಟಾಗಿದೆ. ರಾಜಸ್ಥಾನದ ದೌಸಾ ಎಂಬಲ್ಲಿಯ ಮನೋಹರ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 4 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಯಾತ್ರಿಗಳು ರಾಜಸ್ಥಾನದ ಪ್ರಸಿದ್ಧ ಪುಣ್ಯಕ್ಷೇತ್ರ ಸಾಲ್ಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎರಡು ಪಿಕ್ ಅಪ್ ಗಳಲ್ಲಿ ಯಾತ್ರಿಗಳಿದ್ದರು. ಒಂದು ಪಿಕ್ ಅಪ್ ಮುಂದೆ ಹೋಗಿದ್ದು, ಮತ್ತೊಂದು ಪಿಕ್ ಅಪ್ ಅಪಘಾತಕ್ಕೀಡಾಗಿದೆ. 9 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ರಸ್ತೆ ಅಪಘಾತದ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
In a horrific road accident in Rajasthan early Wednesday morning, ten people — including seven children and three women — lost their lives, while nine others sustained serious injuries.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm