ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ; ಸ್ಮಾರಕಕ್ಕೆ ಗಣ್ಯರಿಂದ ನಮನ

25-12-20 12:24 pm       Headline Karnataka News Network   ದೇಶ - ವಿದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ವರ್ಷದ ಜನ್ಮದಿನ ಹಿನ್ನೆಲೆಯಲ್ಲಿ ಪ್ರಮುಖ ಗಣ್ಯರು ದೆಹಲಿಯಲ್ಲಿರುವ ವಾಜಪೇಯಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.

ನವದೆಹಲಿ, ಡಿ.25: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ವರ್ಷದ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಪ್ರಮುಖ ಗಣ್ಯರು ದೆಹಲಿಯಲ್ಲಿರುವ ವಾಜಪೇಯಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.

ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಿಸಲಾಗಿರುವ ಸದೈವ್ ಅಟಲ್ ಸ್ಮಾರಕದ ಬಳಿ ತೆರಳಿದ ಗಣ್ಯರು ಅಲ್ಲಿನ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ, ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಹಿನ್ನೆಲೆಯಲ್ಲಿ ಬಿಜೆಪಿ ಇಂದು ರೈತರ ದಿನಾಚರಣೆ ಹಮ್ಮಿಕೊಂಡಿದ್ದು, ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸಂತೈಸುವ ಕಾರ್ಯಕ್ರಮ ನಡೆಸಲಿದೆ. ಈ ಬಗ್ಗೆ ಮಧ್ಯಾಹ್ನ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಕೇಂದ್ರ ಸರಕಾರ ತರುತ್ತಿರುವ ಮೂರು ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಲಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ರೈತನ ಖಾತೆಗೆ 2 ಸಾವಿರ ರೂ. ಜಮೆ ಮಾಡುವುದನ್ನು ಪ್ರಕಟಿಸಲಿದ್ದಾರೆ. ಕರ್ನಾಟಕದಲ್ಲಿ 58 ಲಕ್ಷ ರೈತರು ಸೇರಿ ದೇಶದಲ್ಲಿ 9.5 ಕೋಟಿ ರೈತರಿಗೆ ಇದರ ಪ್ರಯೋಜನ ಸಿಗಲಿದೆ. 

Photo Credit: ANI

President Ram Nath Kovind, Prime minister Narendra Modi paid tributes to former PM Atal Bihari Vajpayee at Sadaiv Atal on his 96th birth anniversary on Friday. Union ministers including Amit Shah, Rajnath Singh, Nirmala Sitharaman and Piyush Goyal were also present Sadaiv Atal — a memorial built near Rashtriya Smriti Sthal.