ಬ್ರೇಕಿಂಗ್ ನ್ಯೂಸ್
18-08-25 01:28 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 18 : ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ (ಐಎನ್‌ಡಿಐಎ) ಮಹಾಭಿಯೋಗ ಮಂಡನೆ ಮಾಡುವ ಸಾಧ್ಯತೆ ವ್ಯಕ್ತವಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಮತಕಳವು ಆರೋಪ ಹಾಗೂ ಬಿಹಾರದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಯ ಕುರಿತು ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ಬಳಿಕ ಚುನಾವಣಾ ಆಯೋಗವು ಭಾನುವಾರ ಸುದ್ದಿಗೋಷ್ಠಿ ನಡೆಸಿ ಪ್ರತಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ಇಂಡಿ ಒಕ್ಕೂಟದಲ್ಲಿ ಮಹಾಭಿಯೋಗ ಮಂಡನೆ ಮಾಡುವ ಮಾತುಗಳು ಕೇಳಿಬಂದಿವೆ.
ಎಸ್‌ಐಆರ್ ಪ್ರಕ್ರಿಯೆ ನಂತರ ಬಿಹಾರದ ಕರಡು ಮತದಾರರ ಪಟ್ಟಿಯಿಂದ ಅಳಿಸಲಾಗಿರುವ ಹೆಸರುಗಳ ಪಟ್ಟಿಯನ್ನು ಸುಪ್ರೀಂ ಕೋರ್ಟ್ ಆದೇಶದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದರು. ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯನ್ನು ತರಾತುರಿಯಲ್ಲಿ ಮಾಡಲಾಗಿದೆ ಎಂಬುದು ಪ್ರತಿಪಕ್ಷಗಳು ಹೇಳುತ್ತಿರುವ ಕಟ್ಟುಕಥೆ. ಪ್ರತಿಯೊಂದು ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಚುನಾವಣಾ ಆಯೋಗದ ಕರ್ತವ್ಯ. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಆಡಳಿತ ಮತ್ತು ಪ್ರತಿಪಕ್ಷಗಳೆರಡೂ ಚುನಾವಣಾ ಪ್ರಾಧಿಕಾರಕ್ಕೆ ಸಮಾನ ಎಂದು ಹೇಳಿದ್ದಾರೆ. ಅಲ್ಲದೆ, ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಹೇಳುತ್ತಿರುವ ಆರೋಪದ ಕುರಿತು ಕಾಂಗ್ರೆಸ್ ನಾಯಕರು ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ಅವರ ಮತ ಕಳ್ಳತನದ ಆರೋಪಗಳನ್ನು ಆಧಾರರಹಿತ ಮತ್ತು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಜ್ಞಾನೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ರಾಹುಲ್ ಗಾಂಧಿಯವರು ಬಳಸುತ್ತಿರುವ ಮತ ಕಳ್ಳತನ ಎಂಬ ಪದವು ಅನುಚಿತವಾದುದು ಮತ್ತು ಆ ಪದ ಬಳಕೆಯ ಮೂಲಕ ಸಂವಿಧಾನಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದೂ ಚುನಾವಣಾ ಆಯುಕ್ತರು ಹೇಳಿದ್ದಾರೆ. ಇದರ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸೋಮವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ, ಚುನಾವಣಾ ಆಯೋಗದ ಮುಖ್ಯಸ್ಥರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಮಂಡಿಸುವ ಬಗ್ಗೆ ಚರ್ಚಿಸಿವೆ. ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಯು ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ಪ್ರಕಿಯೆಯಂತೆಯೇ ಇರಲಿದ್ದು, ಮಹಾಭಿಯೋಗ ಪ್ರಯೋಗದ ಪ್ರಸ್ತಾವನೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.
2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ ವಂಚನೆ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಇದರ ಮಧ್ಯೆಯೇ ಬಿಹಾರದಲ್ಲಿ ಮತದಾರರ ಅಧಿಕಾರ ಯಾತ್ರೆಯನ್ನೂ ರಾಹುಲ್ ಗಾಂಧಿ ಪ್ರಾರಂಭಿಸಿದ್ದು, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷ ಆರ್‌ಜೆಡಿ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನೆ ಮಾಡುತ್ತಿದೆ. ಈ ಆರೋಪಕ್ಕೆ ಪ್ರತಿಯಾಗಿ ಚುನಾವಣಾ ಆಯೋಗವು, ಲೋಕಸಭಾ ಚುನಾವಣೆಗೆ 1 ಕೋಟಿಗೂ ಹೆಚ್ಚು ಅಧಿಕಾರಿಗಳು, 10 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಏಜೆಂಟ್‌ಗಳು ಮತ್ತು 20 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಏಜೆಂಟ್‌ಗಳು ಕೆಲಸ ಮಾಡಿದ್ದಾರೆ. ಇಷ್ಟು ಜನರ ಮುಂದೆ ಮತ್ತು ಪಾರದರ್ಶಕ ಪ್ರಕ್ರಿಯೆಯೊಂದಿಗೆ ಚುನಾವಣೆ ನಡೆದಿರುವಾಗ ಯಾರಾದರೂ ಮತಗಳನ್ನು ಕದಿಯಬಹುದೇ ಎಂದು ಪ್ರಶ್ನಿಸಿದೆ.
ಡಬಲ್ ವೋಟಿಂಗ್ ಕುರಿತ ಆರೋಪಕ್ಕೆ ಯಾವುದೇ ಪುರಾವೆಯನ್ನೂ ಒದಗಿಸಿಲ್ಲ ಎಂದೂ ಚುನಾವಣಾ ಆಯೋಗ ತಿರುಗೇಟು ನೀಡಿದೆ. ಮಹದೇವಪುರದ ಬಗ್ಗೆ ರಾಹುಲ್ ಗಾಂಧಿಯವರ ಆರೋಪಗಳ ನಂತರ, ಕರ್ನಾಟಕದ ಚುನಾವಣಾ ಆಯೋಗವು ಆ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಸ್ವಯಂ ಘೋಷಣೆ ಸಲ್ಲಿಸಲು ಕೇಳಿತ್ತು. ಆದರೆ ಅದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದರು.
The opposition INDIA bloc is reportedly considering initiating impeachment proceedings against Chief Election Commissioner (CEC) Rajiv Kumar, following a sharp face-off between the Election Commission of India (ECI) and opposition leaders over alleged voter manipulation in Bihar and Karnataka.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am