ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm