ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ; ಅಭಿನಂದಿಸಿದ ಪ್ರಧಾನಿ ಮೋದಿ 

20-09-25 11:03 pm       HK News Desk   ದೇಶ - ವಿದೇಶ

ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿ ಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಲಾಲ್ ನಟಿಸಿದ್ದಾರೆ.   

ನವದೆಹಲಿ, ಸೆ.20 : ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿ ಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಲಾಲ್ ನಟಿಸಿದ್ದಾರೆ.   

ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಪದ್ಮಭೂಷಣ ಪುರಸ್ಕಾರವನ್ನು ಮೋಹನ್ ಲಾಲ್ ಪಡೆದಿದ್ದಾರೆ. ಸೆ.23ರಂದು 2023ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. 

"ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಭಾರತ ಸರ್ಕಾರವು ಮೋಹನ್ ಲಾಲ್ ಅವರಿಗೆ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಿದೆ. ಮೋಹನ್ ಲಾಲ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಸಚಿವಾಲಯ X ನಲ್ಲಿ ಪೋಸ್ಟ್ ಮಾಡಿದೆ. 

2025ರ ಸೆಪ್ಟೆಂಬರ್ 23ರಂದು ನಡೆಯುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಕಳೆದ ವರ್ಷ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಮೋಹನ್ ಲಾಲ್ ಈ ಗೌರವವನ್ನು ಸ್ವೀಕರಿಸುವುದು ಮಲಯಾಳಂ ಚಿತ್ರರಂಗಕ್ಕೆ ಅಷ್ಟೇ ಅಲ್ಲ, ಇಡೀ ಭಾರತೀಯ ಚಲನಚಿತ್ರೋದ್ಯಮಕ್ಕೆ ಐತಿಹಾಸಿಕ ಕ್ಷಣವಾಗಿದೆ. 

ಮೋಹನ್ ಲಾಲ್ ಅವರು ಬಹುಮುಖ ಪ್ರತಿಭೆಯ ಪ್ರತೀಕವಾಗಿದ್ದು ಮಲಯಾಳಂ ಸಿನಿಮಾ, ರಂಗಭೂಮಿಯಲ್ಲಿ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

Malayalam superstar Mohanlal has been announced as the recipient of the 2023 Dadasaheb Phalke Award for his outstanding contribution to Indian cinema, with over 400 films across multiple languages and numerous accolades including five National Film Awards and the Padma Bhushan.