ಬ್ರೇಕಿಂಗ್ ನ್ಯೂಸ್
29-09-25 03:54 pm HK News Desk ದೇಶ - ವಿದೇಶ
ದುಬೈ, ಸೆ.29 : ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ ತಂಡವು ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಿಚ್‌ನಲ್ಲೇ ಪ್ರತೀಕಾರ ತೀರಿಸಿಕೊಂಡಿದೆ. ಭಾರತ ತಂಡ ಗೆದ್ದ ಬಳಿಕ ಮೈದಾನದಲ್ಲಿ ಹೈಡ್ರಾಮಾವೇ ನಡೆದಿದೆ. ಪಾಕಿಸ್ತಾನದ ಸಚಿವ ಹಾಗೂ ಏಷ್ಯಾ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಖ್ವಿಯಿಂದ ಕಪ್ ಸ್ವೀಕಾರಕ್ಕೆ ಭಾರತ ಕ್ರಿಕೆಟ್ ತಂಡ ನಿರಾಕರಿಸಿದ್ದು ಕಪ್ ಇಲ್ಲದೆಯೇ ಪಿಚ್‌ನಲ್ಲಿ ಟೀಂ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ.
ಪಂದ್ಯ ಮುಗಿದ ಒಂದು ಗಂಟೆ ಬಳಿಕ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಿತು. ಮೊದಲಿಗೆ ಪಾಕಿಸ್ತಾನ ಆಟಗಾರರಿಗೆ ರನ್ನರ್ ಆಪ್ ಬಹುಮಾನ ವಿತರಣೆ ಮಾಡಲಾಯಿತು. ಈ ವೇಳೆ, ಪಾಕ್‌ನ ಪ್ರತಿ ಆಟಗಾರರು ವೇದಿಕೆ ಮೇಲೆ ಬಂದಾಗಲೂ ‘ಮೋದಿ… ಮೋದಿ, ಇಂಡಿಯಾʼ ಎಂದು ಪ್ರೇಕ್ಷಕರು ಘೋಷಣೆ ಕೂಗಿದ್ದು ಪಾಕ್ ಆಟಗಾರರು ಮುಜುಗರಕ್ಕೆ ಒಳಗಾದರು. ರನ್ನರ್ ಅಪ್ ಬಹುಮಾನಕ್ಕೆ ಬಂದ ಪಾಕ್ ಕ್ಯಾಪ್ಟನ್ ಸಲ್ಮಾನ್ ಬಾಂಗ್ಲಾ ಕ್ರಿಕೆಟ್ ಮುಖ್ಯಸ್ಥರಿಂದ ಚೆಕ್‌ನ್ನು ಪಡೆದು ವೇದಿಕೆ ಮೇಲೆಯೇ ಹರಿದು ಎಸೆದಿದ್ದಾರೆ.




ಭಾರತದ ಆಟಗಾರರಿಗೆ ಕಪ್ ನೀಡಲು ಪಾಕ್ ಸಚಿವ ನಖ್ವಿ ವೇದಿಕೆಗೆ ಬಂದಾಗ ಟೀಂ ಇಂಡಿಯಾ ಆಟಗಾರರು ವೇದಿಕೆಯಿಂದ 10-15 ಅಡಿ ದೂರದಲ್ಲೇ ನಿಂತು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ರೋಫಿ ಸ್ವೀಕರಿಸದೇ ಮೈದಾನದಲ್ಲಿ ಸಂಭ್ರಮಿಸಿದ್ದಾರೆ. ಪಂದ್ಯಶ್ರೇಷ್ಠ ಸೇರಿದಂತೆ ಇನ್ನಿತರ ಪ್ರಶಸ್ತಿಯನ್ನು ಉಳಿದ ಗಣ್ಯರಿಂದ ಭಾರತದ ಆಟಗಾರರು ಪಡೆದಿದ್ದಾರೆ.
ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಉದ್ವಿಗ್ನತೆಯನ್ನು ಪ್ರತಿಬಿಂಬಿಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಳೆದ ಏಪ್ರಿಲ್‌ನಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ, ಉಗ್ರ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲಿಂದ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ.
ಟ್ರೋಫಿ ಪಾಕ್ ನದ್ದಲ್ಲ, ಹೇಗೆ ಪಡೆಯಬೇಕೆಂದು ಗೊತ್ತಿದೆ..
ಏಷ್ಯಾ ಕಪ್ ಟ್ರೋಫಿಯನ್ನು ನಿರಾಕರಿಸಿರುವ ಭಾರತೀಯ ತಂಡದ ನಿಲುವನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸಮರ್ಥಿಸಿದ್ದು, ನಮ್ಮ ವಿರುದ್ಧ ಯುದ್ಧ ನಡೆಸುತ್ತಿರುವ ವ್ಯಕ್ತಿಯಿಂದ ಭಾರತ ಟ್ರೋಫಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾರತ ತಂಡ ಚಾಂಪಿಯನ್ ಆಗಿದ್ದು, ಟ್ರೋಫಿ ಪಡೆಯಲು ಅರ್ಹವಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಏಷ್ಯಾ ಕಪ್ ಆಯೋಜಿಸುವುದಿಲ್ಲ. ಅದರ ಜವಾಬ್ದಾರಿ ಸಂಪೂರ್ಣ ಏಷ್ಯನ್ ಕ್ರಿಕೆಟ್ ಮಂಡಳಿಯದ್ದು. ಟ್ರೋಫಿ ಪಾಕಿಸ್ತಾನ ಮಂಡಳಿಯ ಆಸ್ತಿಯಲ್ಲ, ಆದರೆ ಅದನ್ನು ನಖ್ವಿ ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದು ಹೇಗೆ. ಟ್ರೋಫಿಯನ್ನು ಯಾರಿಂದ ಪಡೆಯಬೇಕೆಂಬುದನ್ನು ಭಾರತೀಯ ತಂಡ ಮತ್ತು ಬಿಸಿಸಿಐ ನಿರ್ಧರಿಸುತ್ತದೆ. ಭಾರತ ತಂಡವು ಟ್ರೋಫಿಯನ್ನು ಪಡೆಯುತ್ತದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಭಾರತವು ಎಲ್ಲಾ ಏಳು ಪಂದ್ಯಗಳನ್ನು ಗೆದ್ದಿದೆ, ಪಾಕಿಸ್ತಾನವನ್ನು 3-0 ಅಂತರದಿಂದ ಸೋಲಿಸಿದೆ. ಇದು ದೇಶಕ್ಕೆ ಒಂದು ದೊಡ್ಡ ಗೆಲುವು ಮತ್ತು ದೊಡ್ಡ ಸಾಧನೆಯಾಗಿದೆ. ಪಹಲ್ಗಾಮ್ ಉಗ್ರರ ದಾಳಿಯ ನಂತರ ಪಾಕಿಸ್ತಾನವನ್ನು ಒಳಗೊಂಡ ಪಂದ್ಯಾವಳಿಯಲ್ಲಿ ಭಾರತ ಭಾಗವಹಿಸುವಿಕೆಯ ಬಗ್ಗೆ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಟೀಕೆಗಳ ನಡುವೆ, ಬಿಸಿಸಿಐ ಸರ್ಕಾರಿ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಿದೆ.
ಏಷ್ಯಾ ಕಪ್‌ನಂತಹ ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ, ಅನೇಕ ದೇಶಗಳು ಭಾಗಿಯಾಗಿವೆ, ಹೀಗಾಗಿ ಭಾರತೀಯ ತಂಡಗಳು ಭಾಗವಹಿಸಬೇಕಿದೆ. ಇಲ್ಲದಿದ್ದರೆ, ಇದು ನಮ್ಮ ಇತರ ಪಂದ್ಯಗಳು ಪರಿಣಾಮ ಬೀರುತ್ತವೆ, ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಫೆಡರೇಶನ್ ನಿಷೇಧಿಸಲ್ಪಡುತ್ತದೆ. ಆದ್ದರಿಂದ ನಾವು ಕೇಂದ್ರ ಸರ್ಕಾರದ ನೀತಿಯನ್ನು ಅನುಸರಿಸಿದ್ದೇವೆ. ಕೆಲವು ಭಾಗಗಳಿಂದ ಕೆಲವು ಪ್ರತಿಭಟನೆಗಳ ಹೊರತಾಗಿಯೂ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದೇವೆ ಎಂದು ಸೈಕಿಯಾ ಹೇಳಿದ್ದಾರೆ.
Team India defeated Pakistan by five wickets in the Asia Cup final but refused to accept the winner’s trophy from Pakistan minister and ACC president Nakvi. In a symbolic protest linked to the Pahalgam terror attack, Indian players chose to celebrate on the pitch without the trophy. The award ceremony saw dramatic moments, including Indian fans chanting “Modi, Modi” during Pakistan’s runner-up presentation and Pakistan captain Salman tearing his runner-up cheque on stage
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am