ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸಿಲುಕಿ ಖಾಸಗಿ ಬಸ್‌ನಲ್ಲಿದ್ದ 18 ಮಂದಿ ಸಾವು

08-10-25 09:24 am       HK News Desk   ದೇಶ - ವಿದೇಶ

ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ ಜಿಲ್ಲೆಯಲ್ಲಿ ಇಂದು ಮಂಗಳವಾರ ಸಂಜೆ ಭಾರೀ ಭೂಕುಸಿತ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಅವಶೇಷಗಳ ಅಡಿಯಲ್ಲಿ ಹೂತುಹೋದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದಾರೆ.

ಬಿಲಾಸ್‌ಪುರ್, ಅ 08 :‌ ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ ಜಿಲ್ಲೆಯಲ್ಲಿ ಇಂದು ಮಂಗಳವಾರ ಸಂಜೆ ಭಾರೀ ಭೂಕುಸಿತ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಅವಶೇಷಗಳ ಅಡಿಯಲ್ಲಿ ಹೂತುಹೋದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದಾರೆ.

2021ರಲ್ಲಿ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಬೆಟ್ಟದಿಂದ ಬಂಡೆಗಳು ಉಸುಮಾರು 30 ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್, ಹರಿಯಾಣದ ರೋಹ್ಟಕ್‌ನಿಂದ ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ಕ್ಕೆ ತೆರಳುತ್ತಿತ್ತು. ಆದರೆ ಘುಮಾರ್ವಿನ್ ಮಾರ್ಗದಲ್ಲಿ ಭಾರೀ ಮಳೆಯ ಕಾರಣಕ್ಕೆ ಭೂಕುಸಿತ ಸಂಭವಿಸಿದ್ದರಿಂದ, ಬಸ್‌ ಸಂಪೂರ್ಣವಾಗಿ ಭೂಕುಸಿತ ಅವಶೇಷಗಳಡಿ ಸಿಲುಕೊಂಡಿತು, ಪರಿಣಾಮ 18 ಜನರ ಸಾವು ಸಂಭವಿಸಿತ್ತು.

ಝಂಡುಟ್ಟಾ ವಿಧಾನಸಭಾ ಕ್ಷೇತ್ರದ ಭಾಲುಘಾಟ್ ಪ್ರದೇಶದ ಭಲ್ಲು ಸೇತುವೆಯ ಬಳಿ ಅಪಘಾತ ಸಂಭವಿಸಿದ್ದು, ಇದುವರೆಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಮೂವರು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಬಸ್‌ನಲ್ಲಿ ಮತ್ತಷ್ಟು ಪ್ರಯಾಣಿಕರಿದ್ದು, ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿರುವ ಸುಖು, "ಈ ಬೃಹತ್ ಭೂಕುಸಿತದಲ್ಲಿ ಖಾಸಗಿ ಬಸ್ ಸಿಲುಕಿ 18 ಜನರು ಸಾವನ್ನಪ್ಪಿದ ಸುದ್ದಿ ತಿಳಿದು ದು:ಖವಾಗಿದೆ. ಇನ್ನೂ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ತಿಳಿಸಿದ್ದಾರೆ.

"ರಕ್ಷಣಾ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಅಧಿಕಾರಿಗಳಿಗೆ ತಮ್ಮ ಸಂಪೂರ್ಣ ಯಂತ್ರೋಪಕರಣಗಳನ್ನು ನಿಯೋಜಿಸಲು ಸೂಚನೆಗಳನ್ನು ನೀಡಲಾಗಿದೆ. ಸ್ಥಳೀಯ ಆಡಳಿತದೊಂದಿಗೆ ನಿಕಟ ಸಮನ್ವಯ ಸಾಧಿಸಲಾಗಿದೆ" ಎಂದು ಸಿಎಂ ಸುಖವಿಂದರ್‌ ಸಿಂಗ್‌ ಸುಖು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ:

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಪಘಾತ ಘಟನೆಗೆ ತೀವ್ರ ದು:ಖ ವ್ಯಕ್ತಪಡಿಸಿದ್ದು. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಕಚೇರಿ ತನ್ನ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿದ್ದು,"ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ.

At least 18 people were killed after a massive landslide struck Bilaspur district in Himachal Pradesh on Tuesday evening, burying a private bus traveling from Rohtak, Haryana, under debris. The incident occurred near Bhallu Bridge in the Ghumarwin area amid heavy rainfall. Rescue teams have so far pulled three passengers to safety, while several others are feared trapped.