ಬ್ರೇಕಿಂಗ್ ನ್ಯೂಸ್
10-10-25 10:37 pm HK News Desk ದೇಶ - ವಿದೇಶ
ನವದೆಹಲಿ, ಅ.11 : ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನಿಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಸ್ವಯಂಘೋಷಣೆ ಮಾಡಿಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಮುಖಭಂಗವಾಗಿದೆ.
ವೆನಿಜುವೆಲಾದಲ್ಲಿ ಮಾರಿಯಾ ಅವರು ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಸುತ್ತ ಕಳೆದ ಬಾರಿ ಅಧ್ಯಕ್ಷೀಯ ಅಭ್ಯರ್ಥಿಯೂ ಆಗಿದ್ದರು. "ಒಂದು ಕಾಲದಲ್ಲಿ ಆಳವಾಗಿ ವಿಭಜಿಸಲ್ಪಟ್ಟಿದ್ದ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಅವರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇದರೊಂದಿಗೆ ಬಹಳ ಸಮಯದಿಂದ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಕಾಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲಿಗೆ ತೀವ್ರ ನಿರಾಶೆ ಉಂಟು ಮಾಡಿದೆ. ಟ್ರಂಪ್ ತನ್ನನ್ನು ತಾನು ನೊಬೆಲ್ ಪ್ರಶಸ್ತಿಗೆ ಅರ್ಹ ಎಂದು ಹೇಳಿಕೊಂಡಿದ್ದರ ನಡುವೆಯೂ ನಾರ್ವೇಜಿಯನ್ ನೋಬೆಲ್ ಸಮಿತಿಯು ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ.
ವಿಶ್ವ ಮಟ್ಟದಲ್ಲಿ ಈ ಹಿಂದೆ ಯಾರೂ ಮಾಡದ ಕೆಲಸ ಮಾಡಿದ್ದು, ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬರಲೇಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಹೇಳಿದ್ದರು. ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ಮಾತುಕತೆ ಮೂಲಕ ಪರಿಹರಿಸಿದ್ದೇನೆ. ಏಳು ಯುದ್ಧಗಳನ್ನು ಅಂತ್ಯಗೊಳಿಸಿದ್ದೇನೆ. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬರಬೇಕು ಎಂದಿದ್ದರು.
ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈತಪ್ಪಿದ್ದಕ್ಕೆ ಅಮೆರಿಕದ ಶ್ವೇತಭವನ ನಾರ್ವೇಜಿಯನ್ ನೊಬೆಲ್ ಸಮಿತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ನೊಬೆಲ್ ಸಮಿತಿಯು ಶಾಂತಿಗಿಂತ ರಾಜಕೀಯವನ್ನು ಹೆಚ್ಚಾಗಿ ಇಷ್ಟಪಡುತ್ತದೆ ಎಂಬುದನ್ನು ಇದು ಸಾಬೀತುಪಡಿಸಿದೆ" ಎಂದು ಶ್ವೇತಭವನ ಪೋಸ್ಟ್ ಮಾಡಿದೆ. ಇದರ ಹೊರತಾಗಿಯೂ ಟ್ರಂಪ್ ಅವರು ವಿಶ್ವ ರಾಷ್ಟ್ರಗಳಲ್ಲಿ ಶಾಂತಿ ಒಪ್ಪಂದ ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಮುಂದುವರಿಸುತ್ತಾರೆ. ಅವರು ಮಾನವೀಯ ಹೃದಯ ಹೊಂದಿದ್ದಾರೆ ಎಂದು ಹಾಡಿ ಹೊಗಳಿದೆ.
In a major announcement on October 10, 2025, the Norwegian Nobel Committee awarded the Nobel Peace Prize to Venezuelan opposition leader María Corina Machado for her steadfast efforts in promoting democratic rights and leading the push for a peaceful transition from dictatorship to democracy in Venezuela.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm