ಬ್ರೇಕಿಂಗ್ ನ್ಯೂಸ್
18-10-25 07:34 pm HK News Desk ದೇಶ - ವಿದೇಶ
ನವದೆಹಲಿ, ಅ.18: ಕಳೆದ 75 ಗಂಟೆಗಳಲ್ಲಿ 300ಕ್ಕೂ ಹೆಚ್ಚು ಮಾವೋವಾದಿಗಳು ಶಸ್ತ್ರ ಕೆಳಗಿಟ್ಟು ಪೊಲೀಸರ ಮುಂದೆ ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟಿದ್ದಾರೆ.
ಎನ್ ಡಿಟಿವಿ ವಿಶ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಅಲ್ಲದೇ ಶಾಲೆಗಳನ್ನಾಗಲಿ, ಆಸ್ಪತ್ರೆಗಳನ್ನಾಗಲಿ ನಿರ್ಮಿಸಲು ಬಿಡಲಿಲ್ಲ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆಯುತ್ತಿದ್ದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದರು. ಮಾವೋವಾದಿಗಳ ಭಯೋತ್ಪಾದನೆಯಿಂದ ಯುವಜನರಿಗೆ ಅನ್ಯಾಯವಾಗಿತ್ತು ಎಂದು ಭಾವುಕರಾದರು.
ನಮ್ಮ ಸರ್ಕಾರ ಅನ್ಯಾಯಕ್ಕೆ ಒಳಗಾದ ಹಾಗೂ ದಾರಿ ತಪ್ಪಿದ ಯುವಜನರನ್ನ ತಲುಪಿ, ಮತ್ತೆ ಅವರನ್ನ ಮುಖ್ಯವಾಹಿನಿಗೆ ತರಲು ವಿಶೇಷ ಪ್ರಯತ್ನಗಳನ್ನ ನಡೆಸಿದೆ. ಇಡೀ ದೇಶ ಇಂದು ಈ ಪ್ರಯತ್ನಗಳ ಫಲಿತಾಂಶ ನೋಡುತ್ತಿದೆ. ಈಗ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು. ಈಗ ಅವರೇ ಶರಣಾಗಿದ್ದು, ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಲಾಗಿದೆ ಎಂದು ವಿವರಿಸಿದರು.
ನಕ್ಸಲರ ಸಾಮೂಹಿಕ ಶರಣಾಗತಿಯ ಪರಿಣಾಮ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದೆ 125 ಇದ್ದ ನಕ್ಸಲ್ ಪೀಡಿತ ಜಿಲ್ಲೆಗಳು ಈಗ 11ಕ್ಕೆ ಇಳಿಕೆಯಾಗಿದೆ. ನಕ್ಸಲ್ ಚಟುವಟಿಕೆಗಳನ್ನ ತಡೆಯುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ. ಈ ಹಿಂದೆ ಬಸ್ತಾರ್ನಲ್ಲಿ (ತೀವ್ರ ಬಾಧಿತ ಜಿಲ್ಲೆ) ಮಾವೋಗಳು ವಾಹನಗಳನ್ನ ಸ್ಫೋಟಿಸಿ ಭದ್ರತಾ ಸಿಬ್ಬಂದಿಗಳನ್ನ ಹತ್ಯೆಗೈದಿದ್ದರು. ಇಂದು ಅಲ್ಲಿನ ಯುವಕರು ʻಬಸ್ತಾರ್ ಒಲಿಂಪಿಕ್ಸ್ʼ ಆಯೋಜಿಸುತ್ತಿದ್ದಾರೆ. ಇದು ಅತಿದೊಡ್ಡ ಬದಲಾವಣೆ. ಈಗ ಅಲ್ಲಿ ಶಾಂತಿಯ ದೀಪಾವಳಿ ಆಚರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಅಲ್ಲಿನ ಜನರನ್ನು, ನಕ್ಸಲರ ಹಾವಳಿಯನ್ನು ಗಮನಿಸಲಿಲ್ಲ. ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಈ ವ್ಯವಸ್ಥೆಯ ಕುರಿತು ಚರ್ಚೆಸೋದನ್ನೇ ಸಂಪೂರ್ಣ ನಿಗ್ರಹಿಸಲಾಗಿತ್ತು. ಈ ವಿಚಾರದಲ್ಲಿ ಬಹಳ ದೊಡ್ಡ ಸೆನ್ಸಾರ್ಶಿಪ್ ಕಾರ್ಯ ಚಟುವಟಿಕೆ ನಡೆಯುತ್ತಿತ್ತು. ಕಾಂಗ್ರೆಸ್ ಆಳ್ವಿಕೆಯಲ್ಲಿ ಪ್ರವರ್ಧಮಾನಕ್ಕೆ ಬಂದವರು, ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಂಡು ತಮ್ಮನ್ನು ನಗರ ನಕ್ಸಲರು ಎಂದು ಕರೆದುಕೊಂಡಿದ್ದರು ಎಂದು ಪ್ರಧಾನಿ ಮೋದಿ ಹೇಳಿದರು.
In a remarkable turnaround, over 300 Naxalites surrendered within 75 hours, with 170 laying down arms in Chhattisgarh alone, Prime Minister Narendra Modi announced while speaking at the NDTV World Summit.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm