ಬ್ರೇಕಿಂಗ್ ನ್ಯೂಸ್
23-10-25 03:39 pm HK News Desk ದೇಶ - ವಿದೇಶ
ಪಾಟ್ನಾ, ಅ.23 : ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವು ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.
ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಮಾತನಾಡಿ, ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ನಿರ್ಧಾರವನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಹೇಳಿದರು.
ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ(ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಗೆಹ್ಲೋತ್ ಹೇಳಿದ್ದಾರೆ. ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ನ.14ರಂದು ಫಲಿತಾಂಶ ಘೋಷಣೆಯಾಗಲಿದೆ.
ಈ ಬಾರಿ ಪ್ರಶಾಂತ್ ಕಿಶೋರ್ ಪಕ್ಷವು ಸ್ಪರ್ಧಿಸುತ್ತಿರುವುದರಿಂದ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟದ ಮತಗಳನ್ನು ವಿಭಜಿಸಿದಲ್ಲಿ ಇಂಡಿಯಾ ಕೂಟಕ್ಕೆ ಲಾಭವಾಗುವ ಸಾಧ್ಯತೆಯಿದೆ. ಅಲ್ಲದೆ, ಸುದೀರ್ಘ ಕಾಲದ ಸಿಎಂ ನಿತೀಶ್ ಕುಮಾರ್ ಆಡಳಿತ ವಿರೋಧಿ ಅಲೆ ಆರ್ ಜೆಡಿ ಪರವಾಗಿ ವಾಲಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಒಕ್ಕೂಟದ್ದಿದೆ.
The Congress-led INDIA alliance has officially announced RJD leader and former Deputy Chief Minister Tejashwi Yadav as its Chief Ministerial candidate for the upcoming Bihar Assembly elections.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am