ಬ್ರೇಕಿಂಗ್ ನ್ಯೂಸ್
01-11-25 07:27 pm HK News Desk ದೇಶ - ವಿದೇಶ
ಹೈದರಾಬಾದ್, ನ.1 : ಜೆಡ್ಡಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಲಾಗಿತ್ತು. ಎಲ್‌ಟಿಟಿಇ- ಐಎಸ್‌ಐ ಉಗ್ರರು 1984ರ ಮದ್ರಾಸ್ ಏರ್‌ಪೋರ್ಟ್ ಬಾಂಬ್ ದಾಳಿ ರೀತಿಯಲ್ಲಿ ಸ್ಪೋಟಕ್ಕೆ ಯೋಜನೆ ಹಾಕಿದ್ದಾರೆ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೌದಿಯ ಜೆಡ್ಡಾದಿಂದ ಬರುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭದ್ರತಾ ತಪಾಸಣೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಇಂಡಿಗೋ ವಿಮಾನ 6E68 ಗೆ ಬೆದರಿಕೆ ಸಂದೇಶ ಬಂದಿದ್ದು, ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದೆ. ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಸೇರಿದಂತೆ ಅನಾನೂಕೂಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.
A bomb threat email claiming that a human bomb was onboard an IndiGo flight from Jeddah to Hyderabad triggered panic early Saturday morning, prompting authorities to divert the aircraft to Mumbai for an emergency inspection.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am