ಬ್ರೇಕಿಂಗ್ ನ್ಯೂಸ್
13-11-25 08:41 pm HK News Desk ದೇಶ - ವಿದೇಶ
ನವದೆಹಲಿ, ನ.13 : ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಉಗ್ರರ ಡೈರಿಯನ್ನು ಪತ್ತೆ ಮಾಡಿದ್ದು, ಡೈರಿಯಲ್ಲಿ ಸ್ಫೋಟಕ ಮಾಹಿತಿಗಳು ಬಹಿರಂಗಗೊಂಡಿವೆ.
ಉಗ್ರ ಮುಜಾಮಿಲ್ ಹಾಗೂ ಆತ್ಮಾಹುತಿ ಉಗ್ರ ಉಮರ್'ಗೆ ಸೇರಿದ್ದ ಡೈರಿ ಇದಾಗಿದ್ದು, ಡೈರಿಯಲ್ಲಿ ಉಗ್ರರ ಷಡ್ಯಂತ್ರ ಹಾಗೂ ಹಲವು ಕೋಡ್ ವರ್ಡ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಡೈರಿಯಲ್ಲಿ ಹಲವು ಬಾರಿ ಆಪರೇಷನ್ ಪದವನ್ನು ಉಗ್ರರು ಬಳಕೆ ಮಾಡಿದ್ದು, ಉಕಾಸ (ಅರೇಬಿಕ್ ಭಾಷೆಯಲ್ಲಿ ಉಕಾಸ ಎಂದರೆ ಜೇಡ ಎಂದು ಅರ್ಥ) ಎಂಬ ಹ್ಯಾಂಡ್ಲರ್ ಹೆಸರು ಕೂಡ ಡೈರಿಯಲ್ಲಿ ಉಲ್ಲೇಖವಾಗಿದೆ. ಇದಲ್ಲದೆ, 25 ವ್ಯಕ್ತಿಗಳ ಹೆಸರಿದ್ದು, ಇವರಲ್ಲಿ ಹೆಚ್ಚಿನವರು ಜಮ್ಮು ಮತ್ತು ಕಾಶ್ಮೀರ ಹಾಗೂ ಫರೀದಾಬಾದ್ ಮೂಲದವರಾಗಿದ್ದಾರೆಂದು ಮೂಲಗಳು ತಿಳಿಸಿವೆ.

![]()

ಈ ಡೈರಿಗಳನ್ನ ಡಾ.ಉಮರ್ ಅವರ ಕೊಠಡಿ ಸಂಖ್ಯೆ ನಾಲ್ಕು ಮತ್ತು ಮುಜಮ್ಮಿಲ್ ಅವರ ಕೊಠಡಿ ಸಂಖ್ಯೆ 13ರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದರ ಪ್ರಕಾರ, ಎಂಟು ಮಂದಿ ಉಗ್ರರು ನಾಲ್ಕು ಸ್ಥಳಗಳಲ್ಲಿ ಸರಣಿ ದಾಳಿ ನಡೆಸಲು ಯೋಜನೆ ರೂಪಿಸಿದ್ದು, ಪ್ರತೀ ಸ್ಥಳಕ್ಕೆ ತಲಾ ಇಬ್ಬರು ಉಗ್ರರನ್ನು ರವಾನಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಕಾರು ಚಲಾಯಿಸಿದ್ದ ವ್ಯಕ್ತಿ ಡಾ. ಉಮರ್ ದೃಢ
ಈ ನಡುವೆ, ಸ್ಫೋಟ ಘಟನೆ ವೇಳೆ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ ಎನ್ನಲಾಗಿದ್ದ ವ್ಯಕ್ತಿ ಪುಲ್ವಾಮಾ ಜಿಲ್ಲೆಯ ಮೂಲದ ಡಾ. ಉಮರ್ ಉನ್ ನಬಿ ಎನ್ನುವುದು ವಿಧಿವಿಜ್ಞಾನ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಹೋಲಿಕೆಯಿಂದ ದೃಢಪಟ್ಟಿದೆ.
ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಈ ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕವಾಗಿ ಸಾಬೀತುಪಡಿಸುವ ಅಗತ್ಯವಿತ್ತು. ಹೀಗಾಗಿ ಉಮರ್ ಕುಟುಂಬಸ್ಥರ ಡಿಎನ್ಎ ಸಂಗ್ರಹಿಸಿ ಹೋಲಿಕೆ ಮಾಡಲಾಗಿದೆ.
In a major breakthrough in the Red Fort car explosion case, the National Investigation Agency (NIA) has recovered diaries belonging to the two terrorists involved — Dr. Umar and Mujammil. The diaries contain highly sensitive information, coded entries, and details of a wider terror network.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm