ಬ್ರೇಕಿಂಗ್ ನ್ಯೂಸ್
17-11-25 07:33 pm HK News Desk ದೇಶ - ವಿದೇಶ
ನವದೆಹಲಿ, ನ.17: ದೆಹಲಿಯ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಹರ್ಯಾಣ ಮೂಲದ ವೈದ್ಯೆ ಪ್ರಿಯಾಂಕಾ ಶರ್ಮಾ ಎಂಬವರನ್ನು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದ್ದಾರೆ.
ಕೆಂಪುಕೋಟೆ ಬಳಿ ನಡೆದ ಸ್ಫೋಟದ ಬಳಿಕ ದೇಶದಲ್ಲಿ ‘ವೈಟ್ ಕಾಲರ್’ ಉಗ್ರ ಜಾಲ ಬೆಳಕಿಗೆ ಬಂದಿದ್ದು, ತನಿಖಾ ಸಂಸ್ಥೆಗಳು ಉತ್ತರ ಪ್ರದೇಶ ಸೇರಿ ಆರೋಪಿಗಳ ಜೊತೆಗೆ ನಂಟು ಮತ್ತು ಹರ್ಯಾಣ, ದೆಹಲಿಯಲ್ಲಿ ಇತ್ತೀಚೆಗೆ ವೈದ್ಯಕೀಯ ಕಲಿತಿರುವ ವಿದ್ಯಾರ್ಥಿಗಳ ಮೇಲೆ ಕಣ್ಣಿರಿಸಿದೆ. ದಕ್ಷಿಣ ಕಾಶ್ಮೀರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಿಯಾಂಕಾ ಶರ್ಮಾಗೆ ವೈಟ್ ಕಾಲರ್ ಉಗ್ರ ಜಾಲದ ಸಂಪರ್ಕವಿದೆ ಎಂಬ ಆರೋಪದಲ್ಲಿ ವಿಚಾರಣೆ ನಡೆಸಲಾಗಿದೆ.



ಪ್ರಿಯಾಂಕಾ ಶರ್ಮಾ ಹರಿಯಾಣ ಮೂಲದ ವೈದ್ಯೆಯಾಗಿದ್ದು ಕಾಶ್ಮೀರದಲ್ಲಿ ವೃತ್ತಿ ನಿರತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡವು ಶರ್ಮಾಳ ನಿವಾಸಕ್ಕೆ ತೆರಳಿ ಆಕೆಯನ್ನು ವಶಕ್ಕೆ ಪಡೆದು ಭಾನುವಾರ ದಿನವಿಡೀ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆಗೊಳಪಡಿಸಿದೆ. ಈ ವೇಳೆ ಆಕೆಯ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಗಳನ್ನು ಅಧಿಕಾರಿಗಳು ವಶಪಡಿಸಿದ್ದಾರೆ. ಅನಂತ್‌ನಾಗ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಮಾಜಿ ಸಿಬ್ಬಂದಿ ಆದಿಲ್ ಬಂಧನದ ನಂತರ ಪ್ರಿಯಾಂಕಾ ಹೆಸರು ಕೇಳಿಬಂದಿದೆ. ಈ ಉಗ್ರ ಜಾಲಕ್ಕೆ ವಸತಿ ವ್ಯವಸ್ಥೆ ಮತ್ತು ಆರ್ಥಿಕ ಬೆಂಬಲವನ್ನು ಒದಗಿಸುತ್ತಿದ್ದ ಆರೋಪ ಆಕೆಯ ಮೇಲಿದೆ ಎನ್ನಲಾಗಿದೆ.
ಎಂಡಿ ವಿದ್ಯಾರ್ಥಿನಿ ಡಾ. ಪ್ರಿಯಾಂಕಾ ಶರ್ಮಾ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ಅವರ ಸಹೋದರ ಭರತ್ ಭೂಷಣ್ ಮಾತನಾಡಿದ್ದು, "ಪ್ರಿಯಾಂಕ ಪ್ರಸ್ತುತ ವೈದ್ಯಕೀಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅನಂತ್‌ನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಜನರಲ್ ಮೆಡಿಸಿನ್‌ನಲ್ಲಿ ಎಂಡಿ ವ್ಯಾಸಂಗ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ, ಅವರನ್ನು ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದು ನಂತರ ಬಿಡುಗಡೆ ಮಾಡಿದ್ದಾರೆ. ಎಂಬಿಬಿಎಸ್ ಎಲ್ಲಿ ಮುಗಿಸಿದ್ದೀರಿ, ಅವರ ಹಿನ್ನೆಲೆ ಏನು, ಅಲ್ಲಿ ಹೇಗೆ ಓದುತ್ತಿದ್ದಾರೆ ಮತ್ತು ಕುಟುಂಬದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ" ಎಂದು ಹೇಳಿದ್ದಾರೆ.
ಇದೇ ವೇಳೆ, ಆತ್ಮಹತ್ಯಾ ಬಾಂಬರ್ ಡಾ ಉಮರ್ ಉನ್ ನಬಿಯೊಂದಿಗೆ ಸಂಪರ್ಕದಲ್ಲಿದ್ದ ಶಂಕೆಯಲ್ಲಿ ಹರಿಯಾಣದ ನುಹ್‌ನಲ್ಲಿ ಬಂಧಿತರಾಗಿದ್ದ ಡಾ. ರೆಹಾನ್, ಡಾ.ಮುಹಮ್ಮದ್, ಡಾ ಮುಸ್ತಕೀಮ್ ಹಾಗೂ ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾರನ್ನು ಈ ಪ್ರಕರಣದಲ್ಲಿ ಯಾವುದೇ ನಂಟಿಲ್ಲ ಎಂಬ ಕಾರಣಕ್ಕೆ ಭಾನುವಾರ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಉತ್ತರ ಪ್ರದೇಶದ ಸುಮಾರು 200 ಕಾಶ್ಮೀರಿ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ತನಿಖೆ ನಡೆಸುತ್ತಿದೆ. 'ವೈಟ್ ಕಾಲರ್' ಉಗ್ರ ಜಾಲದ ತನಿಖೆಯ ಭಾಗವಾಗಿ ಎಟಿಎಸ್ ಲಕ್ನೋ, ಕಾನ್ಪುರ, ಮೀರತ್, ಸಹರಾನ್‌ಪುರ ಮತ್ತು ಇತರ ನಗರಗಳ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ತನಿಖಾ ತಂಡ ಸಂಪರ್ಕಿಸಿದೆ. ಹರಿಯಾಣದಲ್ಲಿ ಹಲವು ವೈದ್ಯರನ್ನು ಮತ್ತು ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇತರರನ್ನು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿಂದ ವಶಕ್ಕೆ ಪಡೆಯಲಾಗಿದೆ.
The Delhi car blast case has taken a major turn as the NIA questioned Haryana-origin doctor Priyanka Sharma in Jammu & Kashmir’s Anantnag district over alleged links to a growing “white-collar terror network.” Authorities seized her phone and SIM cards for investigation, following the arrest of a former GMC staffer whose disclosures reportedly led to her name.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm