ಬ್ರೇಕಿಂಗ್ ನ್ಯೂಸ್
17-11-25 10:58 pm HK News Desk ದೇಶ - ವಿದೇಶ
ಢಾಕಾ, ನ.17 : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.
ಶೇಖ್ ಹಸೀನಾ ಅವರೇ ವಿದ್ಯಾರ್ಥಿ ಚಳುವಳಿಯನ್ನು ಅತ್ಯಂತ ಕಠೋರವಾಗಿ ಹತ್ತಿಕ್ಕುವಂತೆ ಸೇನೆ ಮತ್ತು ಪೊಲೀಸರಿಗೆ ಆದೇಶ ನೀಡಿದ್ದರು ಎಂಬ ವಾದವನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಒಪ್ಪಿಕೊಂಡಿದೆ. ಹೀಗಾಗಿ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇದಕ್ಕೂ ಮೊದಲು ತಮ್ಮ ಬೆಂಬಲಿಗರಿಗೆ ಶೇಖ್ ಹಸೀನಾ ಆಡಿಯೋ ಸಂದೇಶ ಕಳುಹಿಸಿದ್ದರು. ಇದರಲ್ಲಿ "ನನ್ನ ವಿರುದ್ಧ ನ್ಯಾಯಾಲಯ ನೀಡುವ ತೀರ್ಪಿನ ಬಗ್ಗೆ ಯಾವುದೇ ಭಯವಿಲ್ಲ, ಅಲ್ಲಾ ಜೀವ ಕೊಟ್ಟಿದ್ದಾನೆ, ಅವನೇ ತೆಗೆದುಕೊಳ್ಳುತ್ತಾನೆ" ಎಂದು ಹೇಳಿದ್ದರು. ಅಲ್ಲದೇ ಈ ವಿಚಾರಣೆ ವಿರುದ್ಧ ಆವಾಮಿ ಲೀಗ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಕೂಡ ಸ್ವಯಂಪ್ರೇರಿತ ಎಂದು ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
ಭಾರತದ ಆಪ್ತರಾಗಿರುವ ಶೇಖ್ ಹಸೀನಾ, ಕಳೆದ ವರ್ಷ ತಮ್ಮ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದ ಬಳಿಕ ಬಾಂಗ್ಲಾದಿಂದ ಪಲಾಯನ ಮಾಡಿ ನವದೆಹಲಿಗೆ ಆಗಮಿಸಿದ್ದರು. ತಮಗೆ ಆಶ್ರಯ ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿರುವ ಶೇಖ್ ಹಸೀನಾ, ದಿಲ್ಲಿಯಲ್ಲಿ ಸ್ವತಂತ್ರವಾಗಿ ಬದುಕುತ್ತಿರುವುದಾಗಿ ಹೇಳಿದ್ದರು.
ನ್ಯಾಯಾಲಯ ತೀರ್ಪಿನ ಬೆನ್ನಲ್ಲೇ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರ ಮಾಡಬೇಕೆಂದು ಬಾಂಗ್ಲಾ ಸರ್ಕಾರ ಒತ್ತಾಯಿಸಿದೆ.
A special tribunal in Dhaka has sentenced former Bangladeshi Prime Minister Sheikh Hasina to death in absentia, finding her guilty of crimes against humanity in connection with the brutal suppression of student-led protests in 2024. The tribunal accused her of ordering lethal force, including the use of drones and helicopters, leading to mass killings. Hasina, now in exile in India, has strongly condemned the verdict, calling the trial “biased and politically motivated.”
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm