ಬ್ರೇಕಿಂಗ್ ನ್ಯೂಸ್
23-11-25 09:21 pm HK News Desk ದೇಶ - ವಿದೇಶ
ನವದೆಹಲಿ, ನ.23: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಎರಡು ಶಾಲೆಗಳ ಸಮೀಪದ ಪೊದೆಗಳಲ್ಲಿ 161 ಜಿಲೆಟಿನ್ ಕಡ್ಡಿಗಳು ಸೇರಿದಂತೆ 20 ಕೆಜಿಗೂ ಹೆಚ್ಚು ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.
ಇತ್ತೀಚೆಗೆ ಹರ್ಯಾಣದಲ್ಲಿ 2,900 ಕೆಜಿ ಸ್ಫೋಟಕ ವಸ್ತುಗಳು ವಶಪಡಿಸಿದ ಕೆಲವೇ ದಿನಗಳಲ್ಲಿ ಮತ್ತೊಂದು ಸ್ಫೋಟಕ ಪತ್ತೆ ಘಟನೆ ನಡೆದಿದ್ದು, ಪೊಲೀಸರು ತಕ್ಷಣವೇ ವ್ಯಾಪಕ ಕಾರ್ಯಾಚರಣೆ ನಡೆಸಿದ್ದಾರೆ. ಶಾಲಾ ಮಕ್ಕಳು ಕ್ರಿಕೆಟ್ ಬಾಲ್ ಹುಡುಕಲು ಪೊದೆಗಳ ಬಳಿ ಹೋಗಿದ್ದಾಗ ಈ ಸ್ಫೋಟಕ ಕಡ್ಡಿಗಳನ್ನು ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾಡಳಿತ ಸಿಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು ಶುಕ್ರವಾರ ಸ್ಫೋಟಕಗಳನ್ನು ವಶಪಡಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ಫೋಟಕ ವಸ್ತುಗಳ ಕಾಯಿದೆ, 1908 ರ ಸೆಕ್ಷನ್ 4(A) ಮತ್ತು ಬಿಎನ್‌ಎಸ್ ಸೆಕ್ಷನ್ 288 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
![]()
![]()

ಜಿಲೆಟಿನ್ ಕಡ್ಡಿಗಳನ್ನು ಯಾರು ಮತ್ತು ಯಾವ ಉದ್ದೇಶಕ್ಕಾಗಿ ತಂದಿದ್ದಾರೆಂದು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಲ್ಮೋರಾ ಎಸ್‌ಎಸ್‌ಪಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಜಿಲೆಟಿನ್ ವಸ್ತುಗಳನ್ನು ರಸ್ತೆ ನಿರ್ಮಾಣದಲ್ಲಿ ಕಲ್ಲುಗಳನ್ನು ಒಡೆಯಲು ಬಳಸಲಾಗುತ್ತದೆ. ಆದರೆ ಇತ್ತೀಚೆಗೆ ವಿಧ್ವಂಸಕ ಕೃತ್ಯದ ಉದ್ದೇಶದಿಂದ ಉಗ್ರರು ಭಾರೀ ಪ್ರಮಾಣದ ಸ್ಫೋಟಕ ಸಾಗಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದರಿಂದ ಈ ಕೃತ್ಯವನ್ನು ಉಗ್ರರೇ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಡಬ್ರಾ ಗ್ರಾಮದ ಮುಖ್ಯಸ್ಥ ಅರ್ಜುನ್ ಸಿಂಗ್, ಜಿಲೆಟಿನ್ ವಸ್ತು ಕಳೆದ ವರ್ಷ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಬಿಟ್ಟುಹೋಗಿರುವ ಸಾಧ್ಯತೆ ಇದೆ. ಕಾರ್ಮಿಕರ ಶಿಬಿರವು ಸ್ಫೋಟಕ ಪತ್ತೆಯಾದ ಸ್ಥಳದಿಂದ ಕೇವಲ 30 ಮೀಟರ್ ದೂರದಲ್ಲಿತ್ತು. ಗಟ್ಟಿಯಾದ ಬಂಡೆಗಳನ್ನು ಒಡೆಯಲು ಈ ವಸ್ತುವನ್ನು ತಂದಿರಬಹುದು ಮತ್ತು ನಂತರ ಬಳಸಲು ಸಾಧ್ಯವಾಗದ ಕಾರಣ ಅಲ್ಲಿಯೇ ಬಿಟ್ಟಿರುವ ಸಾಧ್ಯತೆ ಇದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜಿಲೆಟಿನ್ ಕಡ್ಡಿಗಳ ಮೂಲ ಮತ್ತು ಸ್ವರೂಪವನ್ನು ಪತ್ತೆಹಚ್ಚಲು ವಿಧಿ ವಿಜ್ಞಾನ ತಜ್ಞರು ಶನಿವಾರ ಎರಡನೇ ಸುತ್ತಿನ ಪರೀಕ್ಷೆಯನ್ನು ನಡೆಸಿದ್ದಾರೆ. ನ್ಯಾಯಾಲಯದ ಅನುಮೋದನೆಯ ನಂತರ ಸ್ಫೋಟಕಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
More than 20 kg of explosive materials, including 161 gelatin sticks, were found in bushes near two schools in Uttarakhand’s Almora district, triggering major security concerns. Just days after 2,900 kg of explosives were seized in Haryana, this new discovery has raised alarm. According to police reports, schoolchildren who were searching for a cricket ball near the bushes spotted the explosive sticks. The school staff immediately informed the police, who seized the materials on Friday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am