ಚೆನ್ನೈ ; ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ, 6 ಮಂದಿ ಬಲಿ, 50 ಮಂದಿ ಪ್ರಯಾಣಿಕರಿಗೆ ಗಾಯ 

24-11-25 10:04 pm       HK News Desk   ದೇಶ - ವಿದೇಶ

ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 50 ಮಂದಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ , ನ 24: ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 50 ಮಂದಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುರೈಯಿಂದ ಸೆಂಗೋಟೈಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಮತ್ತೊಂದಯ ತೆಂಕಾಶಿಯಿಂದ ಕೋವಿಲ್ಪಟ್ಟಿಯ ಕಡೆಗೆ ಹೋಗುತ್ತಿತ್ತು. ಇಡೈಯಕ್ಕಲ್ನ ದುರೈಸಾಮಿಪುರಂ ಎಂಬಲ್ಲಿ ಬಸ್ ಮಧ್ಯೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ನುಜ್ಜುಗುಜ್ಜಾಗಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ

ಮಧುರೈಯಿಂದ ಸೆಂಗೋಟೈಗೆ ಹೋಗುತ್ತಿದ್ದ ‌ ಕೀಸರ್ ಬಸ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದು, ಸಮಗ್ರ ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲಾ 28 ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ಸಿಎಂ ಸ್ಟಾಲಿನ್‌ ಸಂತಾಪ
ತೆಂಕಾಸಿಯ ಕಡಯನಲ್ಲೂರು ಬಳಿ ನಡೆದ ಬಸ್ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಈ ಘಟನೆ ತೀವ್ರ ದುಃಖವನ್ನುಂಟು ಮಾಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

A horrific road accident between two private buses in Tamil Nadu’s Tenkasi district has claimed six lives. Around 50 passengers were injured in the crash and have been admitted to government hospitals.