ಬ್ರೇಕಿಂಗ್ ನ್ಯೂಸ್
02-12-25 10:25 pm HK News Desk ದೇಶ - ವಿದೇಶ
ಲಕ್ನೋ, ಡಿ.2 : ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಯಮಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಗೆ(ಎಸ್‌ಸಿ) ಸೇರಿದ ಜಿತೇಂದ್ರ ಕುಮಾರ್ ಸಾಹ್ನಿ ಮೇಲೆ ಹಿಂದೂ ದೇವರನ್ನು ಅವಹೇಳನ ಮಾಡಿದ ಕಾರಣ ನೀಡಿ ವಿವಿಧ ಸೆಕ್ಷನ್ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಅದನ್ನು ಪ್ರಶ್ನಿಸಿ ಜಿತೇಂದ್ರ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಪ್ರವೀಣ್ ಕುಮಾರ್ ಗಿರಿ ನೇತೃತ್ವದ ಏಕದಸ್ಯ ಪೀಠ ವಜಾಗೊಳಿಸಿ, ಈ ಮಹತ್ವದ ತೀರ್ಪು ನೀಡಿದೆ.
ತಾನು ಎಸ್‌ಸಿ ಸಮುದಾಯಕ್ಕೆ ಸೇರಿದ್ದು, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ನೀಡುವಂತೆ ಜಿತೇಂದ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ಆಧಾರಿತ ವ್ಯವಸ್ಥೆ ಇಲ್ಲ. ಆದ್ದರಿಂದ ಪರಿಶಿಷ್ಟ ಜಾತಿಯಾಗಿದ್ದರೂ ಆ ಧರ್ಮಕ್ಕೆ ಮತಾಂತರಗೊಂಡ ನಂತರ, ಹಿಂದಿದ್ದ ಜಾತಿ ಪ್ರಮಾಣಪತ್ರ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪಿನಲ್ಲಿ ವಿವರಿಸಿದೆ.
'ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ರಕ್ಷಿಸುವುದು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆ ಉದ್ದೇಶವಾಗಿದೆ. ಹಾಗಾಗಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ವ್ಯಕ್ತಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ತಕ್ಷಣ ತಮ್ಮ ಹಿಂದಿದ್ದ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಈ ಕಾಯ್ದೆಯಲ್ಲಿನ ರಕ್ಷಣಾತ್ಮಕ ನಿಬಂಧನೆಗಳನ್ನು ವಿಸ್ತರಿಸಲಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಅರ್ಜಿದಾರರ ಧರ್ಮದ ಕುರಿತು ಮೂರು ತಿಂಗಳೊಳಗೆ ತನಿಖೆ ನಡೆಸಬೇಕು. ಒಂದೊಮ್ಮೆ ಧರ್ಮದ ವಿಚಾರವಾಗಿ ನಕಲಿ ದಾಖಲೆ ಸೃಷ್ಟಿಸಿರುವುದು ಸಾಬೀತಾದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ಭವಿಷ್ಯದಲ್ಲಿ ಯಾರೂ ನ್ಯಾಯಾಲಯಕ್ಕೆ ಇಂಥ ಪ್ರಮಾಣಪತ್ರಗಳನ್ನು ಸಲ್ಲಿಸಬಾರದು ಎಂದು ನ್ಯಾಯಾಲಯವು ಇದೇ ವೇಳೆ ಮಹಾರಾಜ್‌ಗಂಜ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.
The Allahabad High Court has ruled that individuals who convert to Christianity cannot seek protection under the SC/ST (Prevention of Atrocities) Act, as the Christian faith does not recognize the caste system. The judgment came while dismissing a plea filed by Jitendra Kumar Sahni—originally from a Scheduled Caste—who converted to Christianity and sought protection under the SC/ST Act after being booked for allegedly insulting Hindu deities. Justice Praveen Kumar Giri stated that once a person converts to Christianity, the earlier caste certificate loses validity.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm