ಬ್ರೇಕಿಂಗ್ ನ್ಯೂಸ್
04-12-25 05:39 pm HK News Desk ದೇಶ - ವಿದೇಶ
ಕೊಲ್ಕತ್ತಾ, ಡಿ.4 : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮತ್ತೊಂದು ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದಕ್ಕೆ ಕಾರಣವಾಗಿದ್ದ ಭರತ್‌ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ.
ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು. ಪಕ್ಷವು ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತಿರುವ ಸಮಯದಲ್ಲಿ ಕಬೀರ್ ಅವರ ನಡವಳಿಕೆ ತೀವ್ರ ಅಶಿಸ್ತಿನ ಕೂಡಿದ್ದಾಗಿದೆ ಎಂದು ಅಮಾನತು ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಹಿರಿಯ ನಾಯಕ ಫರ್ಹಾದ್ ಹಕೀಮ್ ಹೇಳಿದ್ದಾರೆ.
ಕಬೀರ್ ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಇದನ್ನು ಟಿಎಂಸಿ ತೀವ್ರವಾಗಿ ವಿರೋಧಿಸುತ್ತದೆ. ಟಿಎಂಸಿ ಕೋಮು ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಈ ಕ್ಷಣದಿಂದ ಅವರಿಗೆ ಪಕ್ಷದೊಂದಿಗೆ ಯಾವುದೇ ಸಂಬಂಧವಿರುವುದಿಲ್ಲ. ನಮ್ಮ ಉನ್ನತ ನಾಯಕತ್ವದ ಸೂಚನೆಯ ಮೇರೆಗೆ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕಬೀರ್, ಪಕ್ಷದಿಂದ ಅಮಾನತು ಮಾಡಿದ್ದಕ್ಕೆ ಹೆದರುವುದಿಲ್ಲ. ರಾಜೀನಾಮೆ ನೀಡಿ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ. ಡಿಸೆಂಬರ್ 6 ರಂದು ನಡೆದ ಕಾರ್ಯಕ್ರಮದಲ್ಲಿ ತನ್ನ ಜೊತೆಗೆ ಲಕ್ಷಾಂತರ ಜನರು ಸೇರುತ್ತಾರೆ ಎಂದು ಹೇಳಿಕೊಂಡಿದ್ದರು.
The Trinamool Congress has suspended Bharatpur MLA Humayun Kabir after he sparked controversy by announcing that a new Babri Masjid would be constructed on December 6 in Murshidabad district of West Bengal. Senior TMC leader Firhad Hakim stated that Kabir’s remarks were inflammatory and violated the party’s commitment to maintaining peace and communal harmony in the state.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 12:38 pm
Mangalore Correspondent
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
04-12-25 04:18 pm
Bangalore Correspondent
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm