ಬ್ರೇಕಿಂಗ್ ನ್ಯೂಸ್
10-12-25 01:17 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ಭಾರತೀಯರ ಅತಿದೊಡ್ಡ ಹಬ್ಬ ದೀಪಾವಳಿ ಬಗ್ಗೆ ಸಂತಸದ ಸುದ್ದಿ ಬಂದಿದೆ. ಯುನೆಸ್ಕೋ ಸಂಸ್ಥೆಯು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರಿಸಿದೆ.
ದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಲಾದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ದೇಶವು ಅಮೂರ್ತ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಅಂತರಸರ್ಕಾರಿ ಸಮಿತಿಯ ಅಧಿವೇಶನವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಡಿಸೆಂಬರ್ 8 ರಿಂದ 13 ರವರೆಗೆ ಕೆಂಪು ಕೋಟೆಯಲ್ಲಿ ಸಮಿತಿಯ 20ನೇ ಅಧಿವೇಶನ ನಡೆಯುತ್ತಿದೆ.
ದೀಪಾವಳಿ ಹಬ್ಬವನ್ನು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಯುನೆಸ್ಕೋದ ಪ್ರತಿನಿಧಿ ಪಟ್ಟಿಗೆ ಸೇರಿಸಲಾಗಿದೆ ಎಂದು ಯುನೆಸ್ಕೋ ಘೋಷಿಸುತ್ತಿದ್ದಂತೆ 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕಿ ಜೈ' ಮಂತ್ರಗಳು ದೆಹಲಿಯ ಕೆಂಪುಕೋಟೆ ಸುತ್ತ ಮೊಳಗಿದವು. ಭಾರತವು ಪ್ರಸ್ತುತ ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ 15 ಅಂಶಗಳನ್ನು ಸೇರಿಸಿಕೊಂಡಿದೆ. ಇವುಗಳಲ್ಲಿ ಕುಂಭಮೇಳ, ಕೋಲ್ಕತ್ತಾದ ದುರ್ಗಾ ಪೂಜೆ, ಗುಜರಾತ್‌ನ ಗರ್ಭಾ ನೃತ್ಯ, ಯೋಗ, ವೇದ ಪಠಣದ ಸಂಪ್ರದಾಯ ಮತ್ತು 'ರಾಮಾಯಣ' ಮಹಾಕಾವ್ಯದ ಸಾಂಪ್ರದಾಯಿಕ ಪ್ರದರ್ಶನವಾದ ರಾಮಲೀಲಾ ಸೇರಿವೆ.
ಯುನೆಸ್ಕೋ ಪಟ್ಟಿಯಲ್ಲಿ ದೀಪಾವಳಿ ಸೇರ್ಪಡೆ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯೊಂದಿಗೆ ಬಹಳ ನಿಕಟ ಸಂಬಂಧ ಹೊಂದಿದೆ. ಇದು ನಮ್ಮ ನಾಗರಿಕತೆಯ ಆತ್ಮ. ಇದು ಜ್ಞಾನೋದಯ ಮತ್ತು ಸದಾಚಾರವನ್ನು ನಿರೂಪಿಸುತ್ತದೆ. ಯುನೆಸ್ಕೋ ಅಮೂರ್ತ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬ ಸೇರ್ಪಡೆಯು ಹಬ್ಬದ ಜಾಗತಿಕ ಜನಪ್ರಿಯತೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ. ಪ್ರಭು ಶ್ರೀರಾಮನ ಆದರ್ಶಗಳು ನಮಗೆ ಶಾಶ್ವತವಾಗಿ ಮಾರ್ಗದರ್ಶನ ನೀಡಲಿ ಎಂದು ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
In a historic and joyous development for Indians worldwide, UNESCO has officially inscribed the Diwali festival into its Intangible Cultural Heritage of Humanity list. The decision was taken during a key session held at Delhi’s Red Fort, where India is hosting the Intergovernmental Committee meeting on intangible cultural heritage for the first time. The 20th session is being held from December 8 to 13.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm