ಬ್ರೇಕಿಂಗ್ ನ್ಯೂಸ್
10-12-25 11:13 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಕಾರ್ತಿಗೈ ದೀಪ ಬೆಳಗಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಮಹಾಭಿಯೋಗ ನಡೆಸಲು ಮುಂದಾಗಿದ್ದು 120 ಸಂಸದರು ಸಹಿ ಹಾಕಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ನೀಡಿದ್ದಾರೆ.
ತಮಿಳುನಾಡಿನ ಡಿಎಂಕೆ ಪಕ್ಷ ಜಡ್ಜ್ ವಿರುದ್ಧ ಸಮರ ಸಾರಿದ್ದು, ನ್ಯಾಯಾಧೀಶರ ಆದೇಶ, ಅವರ ನಡೆಗಳು ನ್ಯಾಯಾಂಗದ ಜಾತ್ಯತೀತ, ಪಾರದರ್ಶಕ, ತಾರತಮ್ಯ ಇಲ್ಲದ ಸ್ವಭಾವಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದೆ. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಡಿಎಂಕೆ ಸಂಸದೆ ಕನಿಮೋಳ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರು ಪ್ರಕರಣಗಳನ್ನು ನಿರ್ದಿಷ್ಟ ರಾಜಕೀಯ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಸೆಕ್ಯುಲರ್ ತತ್ವಕ್ಕೆ ವಿರುದ್ಧವಾಗಿ ನಿರ್ಧರಿಸುತ್ತಿದ್ದಾರೆ ಎಂದು ವಿಪಕ್ಷ ಸಂಸದರು ಆರೋಪಿಸಿದ್ದಾರೆ. ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ನಿರ್ಣಯಕ್ಕೆ ಕನಿಷ್ಠ 100 ಸಂಸದರು ಬೆಂಬಲ ನೀಡಬೇಕಾಗುತ್ತದೆ. ಈಗ ವಿಪಕ್ಷಗಳ 120 ಸಂಸದರು ಸಹಿ ಹಾಕಿದ್ದು ದೂರನ್ನು ಸ್ಪೀಕರ್ ಬಿರ್ಲಾ ಅವರ ಮುಂದಿಟ್ಟಿದ್ದಾರೆ.
ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸುವ ಬಗ್ಗೆ ಸ್ಥಳೀಯರ ಕೋರಿಕೆಯಂತೆ ನ್ಯಾ.ಜಿ.ಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ "ದೀಪಥೂನ್" ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು. ದೀಪ ಉರಿಸುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವು ತೀರ್ಪನ್ನು ಜಾರಿಗೆ ತರಲು ನಿರಾಕರಿಸಿದ್ದು ಹಿಂದೂ ಪರ ಗುಂಪುಗಳ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
Opposition MPs have initiated impeachment proceedings against Madras High Court judge Justice G.R. Swaminathan, who recently permitted the traditional Karthigai Deepam lamp to be lit atop the stone pillar near the dargah on Tirupparankunram Hill in Tamil Nadu.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm