ಬ್ರೇಕಿಂಗ್ ನ್ಯೂಸ್
14-12-25 07:20 pm HK News Desk ದೇಶ - ವಿದೇಶ
ಕ್ಯಾನ್ಬೆರಾ, ಡಿ.14: ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಇಬ್ಬರು ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಗೆ 12 ಮಂದಿ ಬಲಿಯಾಗಿದ್ದಾರೆ.
ಜನರ ಗುಂಪಿನ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದರು. ಜನಸಮೂಹದ ಮೇಲೆ ಮನಬಂದಂತೆ ಸುಮಾರು 50 ಗುಂಡುಗಳನ್ನು ಹಾರಿಸಲಾಯಿತು. ಇಬ್ಬರು ಶೂಟರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಟು ದಿನಗಳ ಯಹೂದಿ ಹಬ್ಬ ಹನುಕ್ಕಾದ ಮೊದಲ ರಾತ್ರಿ ಗುಂಡಿನ ದಾಳಿ ನಡೆಸಲಾಗಿದೆ. ಯಹೂದಿ ಹಬ್ಬದ ಆರಂಭವನ್ನು ಗುರುತಿಸಲು ಕಡಲತೀರದ ಕಾರ್ಯಕ್ರಮಕ್ಕಾಗಿ ನೂರಾರು ಜನರು ಸಮುದ್ರತೀರದಲ್ಲಿ ಜಮಾಯಿಸಿದ್ದರು. ಈ ವೇಳೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.


ಇದರ ನಡುವೆ, ಭಾರತದಲ್ಲಿಯೂ ಯಹೂದಿಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಎಚ್ಚರಿಕೆ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕರುಳು ಕಿವುಚುವ ಭೀಕರ ದೃಶ್ಯಗಳು:
ಚನುಕ್ಕಾ ಬೈ ದಿ ಸೀ ಎಂಬ ಕಾರ್ಯಕ್ರಮದಲ್ಲಿ ಸುಮಾರು 2,000 ಯಹೂದಿ ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಹಬ್ಬದ ಮೊದಲ ರಾತ್ರಿಯ ದೀಪ ಬೆಳಗುವ ಸಮಾರಂಭ ನಡೆಯುತ್ತಿದ್ದಾಗ, ಇಬ್ಬರು ಬಂದೂಕುಧಾರಿಗಳು ಜನರ ಮಧ್ಯೆ ನುಗ್ಗಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವುದು ಮತ್ತು ಹಲವಾರು ಮೃತದೇಹಗಳು ನೆಲದ ಮೇಲೆ ಬಿದ್ದಿರುವುದು. ಅವರನ್ನು ಸಂಬಂಧಿಕರು ಹಿಡಿದು ಗೋಗರೆಯುತ್ತಿರುವುದು ಎಕ್ಸ್‌ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಂಡುಬಂದಿದೆ. ಪ್ಯಾರಾಮೆಡಿಕ್ ಸಿಬ್ಬಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹರಸಾಹಸ ಪಡುತ್ತಿದ್ದಾರೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಹಂತಕರು ಈ ಪ್ರದೇಶದಲ್ಲಿ ಅಡಗಿರುವ ಶಂಕೆ ಇದ್ದು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
11 ವರ್ಷಗಳ ಹಿಂದೆಯೂ ಇದೇ ರೀತಿ ಭೀಕರ ದಾಳಿ;
ಹನುಕ್ಕಾ ಆಚರಣೆಯ ಸಂದರ್ಭ ಆಸ್ಟ್ರೇಲಿಯಾದಲ್ಲಿ ದಾಳಿ ನಡೆದಿರುವುದು ಇದೇ ಮೊದಲಲ್ಲ, 11 ವರ್ಷಗಳ ಹಿಂದೆ ಇದೇ ಹಬ್ಬದ ಸಂದರ್ಭ ಸಿಡ್ನಿಯ ಲಿಂಡ್ಟ್ ಕೆಫೆ ಮೇಲೆ ದಾಳಿ ನಡೆಸಿದ್ದು, ಓರ್ವ ಉಗ್ರ, 18 ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ. ಅದಾದ 16 ಗಂಟೆಗಳ ಕಾಲ ನಡೆದ ಘರ್ಷಣೆಯ ನಂತರ, ಇಬ್ಬರು ಒತ್ತೆಯಾಳುಗಳು ಮತ್ತು ದಾಳಿಕೋರ ಸಾವನ್ನಪ್ಪಿದರು.
A devastating shooting incident at Bondi Beach in Sydney has left 12 people dead, Australian police have confirmed. The attack reportedly occurred when two gunmen opened fire on a crowd gathered at the beach. Authorities say the shooters unleashed around 50 rounds at the large group. Police have taken one of the shooters into custody, while the second is believed to have been killed during the incident, officials said.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm