ಬ್ರೇಕಿಂಗ್ ನ್ಯೂಸ್
16-12-25 01:56 pm HK News Desk ದೇಶ - ವಿದೇಶ
ಭಟ್ಕಳ, ಡಿ.15 : ಮಂಗಳೂರು ಆರ್ ಟಿಓ ಕಚೇರಿ ರೀತಿಯಲ್ಲೇ ಭಟ್ಕಳ ತಹಸೀಲ್ದಾರ್ ಕಚೇರಿಗೆ ತಮಿಳುನಾಡು ಸರ್ಕಾರದ ಐಪಿಎಸ್ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಬಾಂಬ್ ಸ್ಫೋಟದ ಬೆದರಿಕೆ ಹಾಕಲಾಗಿದೆ. ತಮಿಳರು ಹಾಗೂ ಪಾಕಿಸ್ತಾನಿಗಳು ಸೇಡು ತೀರಿಸಲು ತಹಶೀಲ್ದಾರ್ ಕಚೇರಿಯಲ್ಲಿ ಪ್ರಬಲ ಬಾಂಬ್ ಸ್ಫೋಟಿಸಲಿದ್ದಾರೆ. ಅಲ್ಲಿನ ಸಿಬಂದಿಯನ್ನು ಕೂಡಲೇ ತೆರವುಗೊಳಿಸಿ ಎಂದು ಕನ್ನಡದಲ್ಲಿ ಹೆಡ್ಡಿಂಗ್ ನೀಡಿ ಇಂಗ್ಲಿಷ್ ನಲ್ಲಿ ಇ-ಮೇಲ್ ಕಳುಹಿಸಿದ್ದು ಪೊಲೀಸರು ಅಲರ್ಟ್ ಆಗಿದ್ದಾರೆ.
ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ ಎಂಬ ಹೆಸರಿನ ಇಮೇಲ್ ಮೂಲಕ ಇಂದು ಬೆಳಗ್ಗೆ 7.25ಕ್ಕೆ ಸಂದೇಶ ರವಾನೆ ಮಾಡಲಾಗಿದೆ. ತಮಿಳುನಾಡು ಡಿಎಂಕೆ ಸರಕಾರದ ವಿರುದ್ಧ ಬರಹ ಬರೆಯಲಾಗಿದೆ. ಪ್ರಶಾಂತ್ ಕಿಶೋರ್ ಹಾಗೂ ಸುನೀಲ್ ಕನಗೋಲು ಮುಂತಾದವರ ಸೂಚನೆಯಂತೆ ಡಿಎಂಕೆ ಸರಕಾರ 2001ರಲ್ಲಿ ಮಾಧ್ಯಮವನ್ನು ಬುಡಮೇಲು ಮಾಡಲು ಯತ್ನಿಸಿತ್ತು. ಇದು ಹತೋಟಿ ತಪ್ಪಿದಾಗ ರಾಧಾಕೃಷ್ಣನ್ ಐಪಿಎಸ್ ಹಾಗೂ ಜಾಫರ್ ಸೇಟ್ ಎಂಬವರು ಗೆಲಿಲಿಯೋ ಆ್ಯಪ್ ಮೂಲಕ ಕನ್ನಡದವರ ಮೇಲೆ ಗೂಢಚಾರಿಕೆ ಮಾಡಿದ್ದರು. ಡಿಎಂಕೆ ಉದಯನಿಧಿಯ ಉದ್ದೇಶ ಹಣ ಗಳಿಸುವುದಕ್ಕಿಂತ ಹೆಚ್ಚಿನದ್ದೇ ಇದೆ ಎಂದು ಸಂದೇಶದಲ್ಲಿ ಇಲ್ಲಸಲ್ಲದ ವಿಚಾರಗಳನ್ನು ಬರೆಯಲಾಗಿದೆ.
ಅಲ್ಲದೇ, ತಮಿಳುನಾಡಿನಲ್ಲಿ ಹಲವು ಅನಾಥಾಶ್ರಮಗಳ ಹೆಣ್ಣು ಮಕ್ಕಳನ್ನು ಲೈಂಗಿಕ ಉದ್ದೇಶಕ್ಕೆ ಬಳಸಲಾಗುತ್ತಿದೆ. ಡಿಎಂಕೆ ನಾಯಕತ್ವಕ್ಕೆ ಈ ಬಗ್ಗೆ ಮಾಹಿತಿಯಿದ್ದು, ಹೆಣ್ಣು ಮಕ್ಕಳನ್ನು ಮಾನಸಿಕ ಖಿನ್ನತೆಗೆ ಒಳಪಡಿಸಿ ಬಳಸಲಾಗುತ್ತಿದೆ ಎಂದು ಇಮೇಲ್‌ನಲ್ಲಿ ಸಂದೇಶ ಬರೆಯಲಾಗಿದೆ. ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು ಬಾಂಬ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲಿಸಲಾಗುತ್ತಿದೆ. ಈ ಹಿಂದೆ ಭಟ್ಕಳ ಶಹರ ಠಾಣೆಗೂ ಬಾಂಬ್ ಬೆದರಿಕೆ ಬಂದಿದ್ದು ಪ್ರಕರಣದಲ್ಲಿ ತಮಿಳುನಾಡು ಮೂಲದ ಇಬ್ಬರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಭಟ್ಕಳದಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಘಟನೆ ಸಂಬಂಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Following a similar incident at the Mangaluru RTO office, the Bhatkal Tahsildar office received a bomb threat via email on Monday morning, triggering high alert among authorities. The email, sent at 7.25 am from an address identified as Gaina Ramesh@outlook.com , warned of a powerful bomb blast at the Tahsildar office and demanded immediate evacuation of staff.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm