ಬ್ರೇಕಿಂಗ್ ನ್ಯೂಸ್
26-12-25 02:50 pm HK News Desk ದೇಶ - ವಿದೇಶ
ಮುಂಬೈ, ಡಿ.26 : ಇಬ್ಬರು ಪುತ್ರರು ಮತ್ತು ಹೆತ್ತವರು ಸೇರಿ ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ದಂಪತಿ ಮನೆಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
ಪೊಲೀಸರ ಪ್ರಕಾರ, ನಾಂದೇಡ್ ಜಿಲ್ಲೆಯ ಮುದ್ಖೇಡ್ ತಹಸಿಲ್‌ನಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ದಂಪತಿ ಶವಗಳು ಮನೆಯೊಳಗೆ ನೇಣಿಗೆ ಶರಣಾದ ರೀತಿಯಲ್ಲಿ ಪತ್ತೆಯಾಗಿವೆ. ಬೆಳಗ್ಗೆ 8 ಗಂಟೆ ಸುಮಾರಿಗೆ ದಂಪತಿ ಶವ ಕಂಡಿದ್ದರೆ, ಸ್ವಲ್ಪ ಸಮಯದ ನಂತರ ಪುತ್ರರಾದ ಉಮೇಶ್ ಲಾಖೆ (25) ಮತ್ತು ಬಜರಂಗ್ ಲಾಖೆ (23) ಅವರ ಶವಗಳನ್ನು ಹತ್ತಿರದ ರೈಲ್ವೆ ಹಳಿಯಲ್ಲಿ ಪತ್ತೆ ಮಾಡಲಾಗಿದೆ.
ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಸಾವಿನ ಬಗ್ಗೆ ಇನ್ನೂ ದೃಢಪಡಿಸಿಲ್ಲ. ಸಂಪೂರ್ಣ ತಾಂತ್ರಿಕ ತನಿಖೆ ಮತ್ತು ಶವಪರೀಕ್ಷೆಯ ನಂತರವೇ ಸತ್ಯ ಹೊರಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಸ್ವರೂಪ ಆತ್ಮಹತ್ಯೆಯಂತೆ ಕಂಡುಬರುತ್ತಿದೆ. ಆರ್ಥಿಕ ಸಂಕಷ್ಟ ಅಥವಾ ಕುಟುಂಬಕ್ಕೆ ಸಮಸ್ಯೆ ಇತ್ತೇ ಎಂಬುದು ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕುಟುಂಬವು ತಮ್ಮ ಜಮೀನನ್ನು ಉತ್ತಮವಾಗಿ ನೋಡಿಕೊಳ್ಳುತ್ತಿತ್ತು. ಯಾವುದೇ ತೊಂದರೆ ಎದುರಾದ ಕುರಿತು ಮಾಹಿತಿ ಇಲ್ಲ. ಘಟನೆಯ ಬಗ್ಗೆ ನಾಂದೇಡ್ ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A heartbreaking incident from Maharashtra’s Nanded district has left an entire family dead in two separate suicide cases. The parents — Ramesh Sonaji Lakhe (51) and his wife Radhabai Lakhe (45) — were found hanging inside their home in Mudkhed taluk early on Thursday morning. Shortly after the discovery, the bodies of their sons, Umesh Lakhe (25) and Bajrang Lakhe (23), were found on nearby railway tracks, indicating they had jumped in front of a moving train.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am