ಬ್ರೇಕಿಂಗ್ ನ್ಯೂಸ್
26-12-25 05:50 pm HK News Desk ದೇಶ - ವಿದೇಶ
ನವದೆಹಲಿ, ಡಿ.26 : ನೈಜೀರಿಯಾದಲ್ಲಿ ಕ್ರೈಸ್ತರು ಕ್ರಿಸ್ಮಸ್ ಹಬ್ಬ ಆಚರಣೆಯಲ್ಲಿದ್ದಾಗ ಐಸಿಸ್ ಉಗ್ರರು ದಾಳಿ ನಡೆಸಿದ್ದನ್ನು ಖಂಡಿಸಿರುವ ಅಮೆರಿಕವು, ಐಸಿಸ್ ಉಗ್ರರನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಏರ್‌ಸ್ಟ್ರೈಕ್ ಮಾಡಲಾಗಿದೆ ಎಂದು ಅಮೆರಿಕ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ.
ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಂಬ್ ದಾಳಿ ನಡೆಸಿದ್ದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ ಮತ್ತು ಮಾರಕ ದಾಳಿಯನ್ನು ಪ್ರಾರಂಭಿಸಿದೆ ಎಂದು ಬರೆದಿದ್ದಾರೆ.
ಐಸಿಸ್ ಉಗ್ರರು ಮುಗ್ಧ ಕ್ರೈಸ್ತರನ್ನು ಹಲವು ವರ್ಷಗಳಿಂದ ಮತ್ತು ಶತಮಾನಗಳಿಂದ ಗುರಿಯಾಗಿಸಿ ಕ್ರೂರವಾಗಿ ಕೊಲ್ಲುತ್ತಿದ್ದಾರೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ ಅವರು ನರಕಯಾತನೆ ಅನುಭವಿಸಬೇಕಾಗುತ್ತದೆ ಎಂದು ಈ ಹಿಂದೆಯೇ ಎಚ್ಚರಿಕೆ ನೀಡಿದ್ದೆ. ಇಂದು ಬಾಂಬ್ ದಾಳಿ ನಡೆಸುವ ಮೂಲಕ ನರಕಯಾತನೆಯ ದರ್ಶನ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ನೈಜೀರಿಯಾ ರಾಜಧಾನಿ ಬೋರ್ನೋ ಬಳಿಯ ಮಸೀದಿಯ ಮೇಲೆ ಅಮೆರಿಕದ ಬಾಂಬ್ ಬಿದ್ದಿದ್ದು 5 ಜನರು ಮೃತಪಟ್ಟು 35 ಮಂದಿ ಗಾಯಗೊಂಡಿದ್ದಾರೆ. ಅಮೆರಿಕದ ದಾಳಿಯನ್ನು ನೈಜೀರಿಯಾ ದೃಢಪಡಿಸಿದೆ.
ನನ್ನ ನಾಯಕತ್ವದಲ್ಲಿ ಅಮೆರಿಕ ಯಾವುದೇ ಕಾರಣಕ್ಕೂ ಇಸ್ಲಾಮಿಕ್ ಭಯೋತ್ಪಾದನೆಗೆ ಅನುಮತಿ ನೀಡುವುದಿಲ್ಲ. ದೇವರು ನಮ್ಮ ಸೈನ್ಯವನ್ನು ಆಶೀರ್ವದಿಸಲಿ ಮತ್ತು ಮೃತರಾದ ಉಗ್ರರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು. ಉಗ್ರರು ಕ್ರೈಸ್ತರ ಮೇಲಿನ ಹತ್ಯೆ ಮುಂದುವರಿಸಿದರೆ ಮತ್ತೆ ಪ್ರಬಲ ದಾಳಿ ನಡೆಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಉತ್ತರ ನೈಜೀರಿಯಾದಲ್ಲಿ ಐಸಿಸ್ ಉಗ್ರರ ಬಣಗಳು ಮತ್ತು ಬೊಕೋ ಹರಾಮ್ ಉಗ್ರಗಾಮಿ ಸಂಘಟನೆಗಳು ಹಲವು ವರ್ಷಗಳಿಂದ ಭಾರೀ ಹಿಂಸಾಚಾರವನ್ನು ನಡೆಸುತ್ತಿವೆ. ಅತಿ ಹೆಚ್ಚು ಮುಸ್ಲಿಮರು ಇರುವ ದೇಶಗಳಲ್ಲಿ ನೈಜೀರಿಯಾ ಕೂಡ ಒಂದಾಗಿದ್ದು ಅತ್ಯಂತ ಬಡವರು ಕೂಡ ಹೆಚ್ಚಿದ್ದಾರೆ. ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ಅಮೆರಿಕ ಇತ್ತೀಚೆಗೆ ನೈಜೀರಿಯಾವನ್ನು ನಿರ್ದಿಷ್ಟ ಕಾಳಜಿಯ ದೇಶದ ಪಟ್ಟಿಗೆ ಸೇರಿಸಿತ್ತು. ಕ್ರೈಸ್ತರ ಮೇಲಿನ ದೌರ್ಜನ್ಯ ವರದಿಯಾದ ಬಳಿಕ ನೈಜೀರಿಯಾದ ಮೇಲೆ ಮಿಲಿಟರಿ ದಾಳಿ ನಡೆಸಲು ನಿರ್ದೇಶನ ನೀಡಿದ್ದಾಗಿ ಟ್ರಂಪ್ ನವೆಂಬರ್‌ನಲ್ಲಿ ತಿಳಿಸಿದ್ದರು.
While Christians were celebrating Christmas in Nigeria, ISIS militants launched an attack, which the United States strongly condemned. In retaliation, the US carried out an airstrike targeting ISIS terrorists. Former President Donald Trump announced the strike on Truth Social, stating that America will never allow Islamic terrorism to flourish under his leadership. The US airstrike hit a mosque near Borno, killing five people and injuring 35. Trump warned that if attacks on Christians continue, even stronger military action will follow.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm