ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ಸುಡಲು ಯತ್ನ ; ಕೆರೆಗೆ ಹಾರಿ ಜೀವ ಉಳಿಸಿಕೊಂಡ ವ್ಯಕ್ತಿ, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ 

01-01-26 09:34 pm       HK News Desk   ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ. 

ಢಾಕಾ, ಜ.1 : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ. 

ದಾಸ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಶರಿಯತ್‌ಪುರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಘಟನೆ ನಡೆದಿದ್ದು ಖೋಕೊನ್ ದಾಸ್ ತನ್ನ ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಬೆಂಕಿ ಹಚ್ಚಿ ಸಜೀವ ಸುಟ್ಟು ಹಾಕಲು ಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೆಯೋರ್ಬಂಗಾ ಪ್ರದೇಶದಲ್ಲಿ ಫಾರ್ಮಸಿ ನಡೆಸುತ್ತಿದ್ದ ದಾಸ್, ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ನಡೆಸಲಾಗಿದೆ. ಉದ್ರಿಕ್ತ ಗುಂಪು ದಾಸ್ ಅವರ ಹೊಟ್ಟೆಯ ಭಾಗಕ್ಕೆ ಇರಿದು ಗಾಯಗೊಳಿಸಿದೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಆದರೆ ದಾಸ್ ಅವರು ಅಲ್ಲಿಯೇ ಸಮೀಪದಲ್ಲಿದ್ದ ಕೆರೆಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ದಾಸ್ ಅವರನ್ನು ತಕ್ಷಣ ಶರಿಯತ್‌ಪುರ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಎರಡು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಡಿಸೆಂಬರ್ 24ರಂದು 29 ವರ್ಷದ ಅಮೃತ್ ಮೊಂಡಲ್ ಎಂಬ ಯುವಕನ ಹತ್ಯೆಯಾಗಿತ್ತು. ಡಿ.18ರಂದು ದೀಪು ಚಂದ್ರದಾಸ್ ಎಂಬ 25 ವರ್ಷದ ಯುವಕನನ್ನು ಉದ್ರಿಕ್ತ ಗುಂಪು ಹತ್ಯೆಗೈದು ಸುಟ್ಟು ಹಾಕಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

In yet another shocking attack on the Hindu minority community in Bangladesh, a 50-year-old man, Khokon Das, was brutally assaulted and set on fire by a mob in Shariatpur district on December 31.