ಬ್ರೇಕಿಂಗ್ ನ್ಯೂಸ್
07-01-26 04:47 pm HK News Desk ದೇಶ - ವಿದೇಶ
ನವದೆಹಲಿ, ಜ.7 : ದೆಹಲಿಯ ರಾಮಲೀಲಾ ಮೈದಾನದ ಬಳಿಯಿರುವ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಮಾಡುತ್ತಿದ್ದಾಗ ಸ್ಥಳೀಯರು ಏಕಾಏಕಿ ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ತೂರಿ ಹಿಂಸಾಚಾರಕ್ಕಿಳಿದಿದ್ದು, ಐವರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಕೋರ್ಟ್ ಆದೇಶದಂತೆ, ಸರ್ಕಾರಿ ಜಾಗದ ಅತಿಕ್ರಮಣವನ್ನು ತೆರವು ಮಾಡಲು ದೆಹಲಿ ಮಹಾನಗರ ಪಾಲಿಕೆ ಮುಂದಾಗಿತ್ತು. ಈ ವೇಳೆ, ಸ್ಥಳೀಯ ಜನರು ವಿರೋಧಿಸಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ. ಬಳಿಕ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಮೂಲಕ ಉದ್ರಿಕ್ತರನ್ನು ಚದುರಿಸಿದ್ದಾರೆ. ಸಿಸಿಟಿವಿ ಆಧರಿಸಿ ಕಲ್ಲು ತೂರಾಟ ನಡೆಸಿದವರನ್ನು ಪತ್ತೆ ಮಾಡುತ್ತಿದ್ದಾರೆ. ಅಲ್ಲದೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ಅನಿರೀಕ್ಷಿತ ಬೆಳವಣಿಗೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.




ತೆರವು ಕಾರ್ಯಾಚರಣೆಯಿಂದ ಮಸೀದಿಗೆ ಯಾವುದೇ ಹಾನಿಯಾಗಿಲ್ಲ. ದೆಹಲಿ ಹೈಕೋರ್ಟ್ ಸೂಚನೆಯಂತೆ ಅತಿಕ್ರಮಣ ತೆರವು ಮಾಡುತ್ತಿದ್ದು ಪಾಲಿಕೆಯಿಂದ 300 ರಷ್ಟು ಕಾರ್ಮಿಕರು, 30 ಜೆಸಿಬಿ ಇನ್ನಿತರ ವಾಹನಗಳನ್ನು ಬಳಸಲಾಗಿದೆ. ಅತಿಕ್ರಮಿಸಿ ಕಟ್ಟಲಾಗಿರುವ ಕಟ್ಟಡ ಸೇರಿದಂತೆ ಎಲ್ಲವನ್ನೂ ನೆಲಸಮ ಮಾಡಲಾಗುವುದು, ರಾತ್ರಿಯೂ ತೆರವು ಕಾರ್ಯ ಮುಂದುವರಿಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂಸೆಯನ್ನು ಯಾವುದೇ ಕಾರಣಕ್ಕು ಸಹಿಸುವುದಿಲ್ಲ. ಮಸೀದಿ ಆವರಣದಲ್ಲಿ ಅಕ್ರಮವಾಗಿ ಕಟ್ಟಲಾಗಿರುವ ಕಟ್ಟಡಗಳನ್ನು ಕೋರ್ಟ್ ಆದೇಶದಂತೆ ತೆರವು ಮಾಡಲಾಗುವುದು. ಇದರ ನೆಪದಲ್ಲಿ ಹಿಂಸೆಗೆ ಇಳಿದರೆ ಕಠಿಣ ಕ್ರಮ ಜರುಗಿಸಲಾಗುವುದು ದೆಹಲಿ ಸರ್ಕಾರದ ಗೃಹ ಸಚಿವ ಆಶಿಶ್ ಸೂದ್ ತಿಳಿಸಿದ್ದಾರೆ.
Violence broke out in Delhi when locals began pelting stones and bottles at police officers during an anti-encroachment demolition drive near the Sayed Faiz Ilahi Mosque, located close to the Ramlila Maidan. Five police personnel were injured in the attack, and the police have arrested five individuals in connection with the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am