ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್ರೆಸ್ ಮೈತ್ರಿ ; ಮಹಾರಾಷ್ಟ್ರ ನಗರಸಭೆಯಲ್ಲಿ ಕೇಸರಿ ಪಕ್ಷದ ಅಚ್ಚರಿ ! 'ಕೈ' ಬಲದಲ್ಲಿ ಬಿಜೆಪಿಗೆ ಮೇಯರ್ ಪಟ್ಟ 

07-01-26 09:37 pm       HK News Desk   ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿಂಧೆ ಬಣದ ಶಿವಸೇನೆ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದರೂ, ಅಚ್ಚರಿಯ ಬೆಳವಣಿಗೆಯಲ್ಲಿ ನಗರಸಭೆಯೊಂದರ ಅಧಿಕಾರ ಪಡೆಯಲು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ದೂರವಿರಿಸಿ ಬಿಜೆಪಿ, ಕಾಂಗ್ರೆಸ್‌ ಜೊತೆ ಸೇರಿ ಅಧಿಕಾರ ಹಿಡಿದಿದೆ. 

ಮುಂಬೈ, ಜ.7 : ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿಂಧೆ ಬಣದ ಶಿವಸೇನೆ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದರೂ, ಅಚ್ಚರಿಯ ಬೆಳವಣಿಗೆಯಲ್ಲಿ ನಗರಸಭೆಯೊಂದರ ಅಧಿಕಾರ ಪಡೆಯಲು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ದೂರವಿರಿಸಿ ಬಿಜೆಪಿ, ಕಾಂಗ್ರೆಸ್‌ ಜೊತೆ ಸೇರಿ ಅಧಿಕಾರ ಹಿಡಿದಿದೆ. 

ಮಹಾರಾಷ್ಟ್ರದ ಅಂಬರ್ನಾಥ್ ನಗರಸಭೆಯಲ್ಲಿ ಬಿಜೆಪಿ ಸದಸ್ಯೆ ತೇಜಶ್ರೀ ಕರಂಜುಲೆ ಮೇಯರ್‌ ಪಟ್ಟವನ್ನು ಅಲಂಕರಿಸಿದ್ದಾರೆ. ಬಿಜೆಪಿಯ 16, ಕಾಂಗ್ರೆಸ್‌ನ 12 ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಪಕ್ಷದ ನಾಲ್ವರು ಸದಸ್ಯರ ಬೆಂಬಲವನ್ನು ಇವರ ಮೈತ್ರಿಕೂಟ ಹೊಂದಿದ್ದು, ನಗರಸಭೆಯಲ್ಲಿ ಎದುರಾಳಿ ಶಿಂಧೆ ಬಣದ ಎದುರು ಬಹುಮತ ಸಾಧಿಸಿದೆ. 

ಡಿಸೆಂಬರ್ 20ರಂದು 60 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷವು ಅತಿ ಹೆಚ್ಚು 27 ಸ್ಥಾನಗಳನ್ನು ಗೆದ್ದುಕೊಂಡಿದ್ದರೂ ಬಹುಮತಕ್ಕೆ 4 ಸ್ಥಾನಗಳ ಕೊರತೆಯಿತ್ತು. ಅಧಿಕೃತ ಮೈತ್ರಿ ಪಕ್ಷ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಫಲಿತಾಂಶ ಪಡೆದಿತ್ತು. ‌ಆದರೆ ಮೇಯರ್ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡಬೇಕೆಂಬ ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ.‌

ಅಂಬರ್ನಾಥ್ ವಿಕಾಸ್ ಅಘಾಡಿ ಹೆಸರಿನಲ್ಲಿ ಮೂರು ಪಕ್ಷಗಳು ಅಧಿಕಾರಕ್ಕಾಗಿ ಒಂದಾಗಿರುವುದು ಸ್ಪಷ್ಟವಾಗಿದೆ. ಈ ಮೈತ್ರಿಕೂಟಕ್ಕೆ ಯಾವುದೇ ಔಪಚಾರಿಕ ಸಮ್ಮತಿ ಇಲ್ಲ ಎಂದು ಕಾಂಗ್ರೆಸ್ ರಾಜ್ಯ ನಾಯಕತ್ವ ಹೇಳಿದರೆ, ಇವು ಸ್ಥಳೀಯ ಚುನಾವಣೆಗಳಾಗಿದ್ದು ಸ್ಥಳೀಯ ನಾಯಕರಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. 

ಶಿಂಧೆ ಬಣದ ಶಾಸಕ ಬಾಲಾಜಿ ಕಿನಿಕರ್ ಅವರು ಈ ಮೈತ್ರಿಕೂಟವನ್ನು ಅಪವಿತ್ರ ಮೈತ್ರಿ ಎಂದು ಕರೆದಿದ್ದು ಬಿಜೆಪಿ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ದೇಶಾದ್ಯಂತ ಕಾಂಗ್ರೆಸ್‌ ಮುಕ್ತಗೊಳಿಸುವ ಬಗ್ಗೆ ಮಾತನಾಡುತ್ತಿದೆ. ಆದರೆ ಇಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್‌ ಜೊತೆ ಸೇರಿದ್ದು ಶಿವಸೇನೆಯ ಬೆನ್ನಿಗೆ ಚೂರಿ ಹಾಕಿದೆ ಎಂದು ದೂರಿದ್ದಾರೆ.

In a surprising political development, the BJP has joined hands with the Congress—instead of ally Shinde-led Shiv Sena—to capture power in a Maharashtra municipal council. This happened despite the BJP–Shinde faction coalition ruling the state together.