ಬ್ರೇಕಿಂಗ್ ನ್ಯೂಸ್
15-01-26 12:14 pm HK News Desk ದೇಶ - ವಿದೇಶ
ಕಾಸರಗೋಡು, ಜ.15 : ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಪ್ಲಾಜಾ ವಿರೋಧಿ ಹೋರಾಟ ವಿಕೋಪಕ್ಕೆ ತಿರುಗಿದ್ದು, ಬುಧವಾರ ರಾತ್ರಿ ಏಕಾಏಕಿ ಸಾವಿರಾರು ಮಂದಿ ಪ್ರತಿಭಟನಾಕಾರರು ನುಗ್ಗಿ ಬಂದು ಟೋಲ್ ಗೇಟ್ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿಗೈದಿದ್ದಾರೆ.
ಕುಂಬಳೆ ಪೇಟೆಯಿಂದ ಬಂದ ಸಾವಿರಕ್ಕೂ ಅಧಿಕ ಮಂದಿ ತಡರಾತ್ರಿ ಹೊಸದಾಗಿ ಹಾಕಿರುವ ಟೋಲ್ ಗೇಟ್ ಕ್ಯಾಮರಾಗಳನ್ನು ಧ್ವಂಸಗೊಳಿಸಿದ್ದು, ಕಚೇರಿ ಗಾಜುಗಳನ್ನು ಹಾನಿಗೊಳಿಸಿದ್ದಾರೆ. ವಾಹನಗಳನ್ನು ತಡೆಯುವ ಟೋಲ್ ಬೂತ್ ಹ್ಯಾಂಡಲ್ ಗಳನ್ನು ಪ್ರತಿಭಟನಕಾರರು ಕಿತ್ತು ಹಾಕಿದ್ದಾರೆ. ಸ್ಕ್ಯಾನರ್ ಗಳಿಗೆ ಕಪ್ಪು ಸ್ಟಿಕ್ಕರ್ ಲಗತ್ತಿಸಿದ್ದು ವಾಹನಗಳನ್ನು ನೇರವಾಗಿ ಹೋಗಲು ಬಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ ಜನರನ್ನು ಚದುರಿಸಲಾಗಿದೆ.







ಡಿವೈಎಫ್ಐ, ಲೀಗ್ ಸೇರಿದಂತೆ ಹಲವು ಯುವಜನ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ್ದರು. ಕಚೇರಿಯೊಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದು ರಕ್ಷಣೆ ನೀಡಿದ್ದಾರೆ. ಶಾಸಕ ಎಂಕೆಎಂ ಅಶ್ರಫ್ ನೇತೃತ್ವದ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೋಮವಾರದಿಂದ ಪೊಲೀಸರು ಟೋಲ್ ಗೇಟ್ ಗೆ ಭದ್ರತೆ ಕಲ್ಪಿಸಿದ್ದಾರೆ. ಆದರೆ ರಾತ್ರಿ ವೇಳೆ ಏಕಾಏಕಿ ಸಾವಿರಾರು ಜನರು ಬಂದಿದ್ದರಿಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡಿದರು. ಘಟನೆ ಬಳಿಕ ವಾಹನಗಳು ಬೆಳಗ್ಗೆ ವರೆಗೆ ಟೋಲ್ ಶುಲ್ಕ ಇಲ್ಲದೆ ಸಂಚಾರ ನಡೆಸಿದವು.
ತಾತ್ಕಾಲಿಕ ಟೋಲ್ ವಸೂಲಿ ವಿರುದ್ಧ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಸಭೆ ಯಾವುದೇ ತೀರ್ಮಾನಕ್ಕೆ ಬರಲು ವಿಫಲಗೊಂಡಿತ್ತು. ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಸಮ್ಮುಖದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ನಿರ್ಧಾರಕ್ಕೆ ಬರಲಾಯಿತು. ಆದರೆ ಪ್ರಕರಣ ಹೈಕೋರ್ಟ್ ವಿಚಾರಣೆಯಲ್ಲಿರುವುದರಿಂದ ಅಂತಿಮ ತೀರ್ಮಾನ ಹೊರಬೀಳುವ ತನಕ ಟೋಲ್ ವಸೂಲಿ ಸ್ಥಗಿತಗೊಳಿವಂತೆ ಶಾಸಕ ಅಶ್ರಫ್ ಒತ್ತಾಯಿಸಿದ್ದಾರೆ.
A protest against the Arikkady toll plaza near Kumble in Kasaragod district escalated into violence late Wednesday night, as thousands of protesters stormed the site and vandalised toll infrastructure. Protesters smashed CCTV cameras, damaged glass panels, tore off booth barriers, and disabled scanners, allowing vehicles to pass without paying toll fees until morning.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm