ಬ್ರೇಕಿಂಗ್ ನ್ಯೂಸ್
18-01-26 11:47 am HK News Desk ದೇಶ - ವಿದೇಶ
ನವದೆಹಲಿ, ಜ.18: ಭಾರತದ ಮೇಲೆ ಅಮೆರಿಕ 50 ಶೇಕಡಾ ಸುಂಕ ಹೇರಿದ ಬೆನ್ನಲ್ಲೇ ಭಾರತವೂ ಅಮೆರಿಕದಿಂದ ಆಮದಾಗುವ ವಸ್ತುಗಳ ಮೇಲೆ ಸುಂಕ ವಿಧಿಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಅಮೆರಿಕದಿಂದ ಆಮದಾಗುವ ದ್ವಿದಳ ಧಾನ್ಯಗಳ ಮೇಲೆ ಭಾರತ 30 ಶೇ. ಸುಂಕ ಹೇರಿದೆ.
ಸುಂಕ ಸಮರದ ಬಗ್ಗೆ ಇಬ್ಬರು ಅಮೇರಿಕದ ಸೆನೆಟರ್ಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪತ್ರ ಬರೆದು, ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಭಾರತ ವಿಧಿಸಿರುವ 30% ಆಮದು ಸುಂಕವನ್ನು ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ, ಇದು ಅನ್ಯಾಯ ಎಂದು ಕರೆದಿದ್ದಾರೆ.
ಉತ್ತರ ಡಕೋಟಾದ ಕೆವಿನ್ ಕ್ರೇಮರ್ ಮತ್ತು ಮಾಂಟಾನಾದ ಸ್ಟೀವ್ ಡೈನ್ಸ್ ಅವರು ಜ.16 ರಂದು ಬರೆದ ಪತ್ರದಲ್ಲಿ, ಕಳೆದ ವರ್ಷ ಅಕ್ಟೋಬರ್ 30 ರಂದು ಭಾರತವು ಅಮೆರಿಕದ ಹಳದಿ ಬಟಾಣಿಗಳ ಮೇಲೆ 30% ಸುಂಕವನ್ನು ವಿಧಿಸಿದೆ. ಇದು ನವೆಂಬರ್ 1 ರಿಂದ ಜಾರಿಗೆ ಬಂದಿದೆ. ಸರ್ಕಾರ ಇದರ ಬಗ್ಗೆ ಯಾವುದೇ ಪ್ರಚಾರ ಮಾಡದ ಕಾರಣ ಇದು ಅಷ್ಟೊಂದು ಸುದ್ದಿಯಾಗಲಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಭಾರತದ ಈ ನಿರ್ಧಾರದಿಂದ ಅಮೆರಿಕದ ದ್ವಿದಳ ಧಾನ್ಯ ಬೆಳೆ ಉತ್ಪಾದಕರಿಗೆ ಸಮಸ್ಯೆಯಾಗಿದೆ. ತಮ್ಮ ಉತ್ತಮ ಗುಣಮಟ್ಟದ ಉತ್ಪನ್ನವನ್ನು ಭಾರತಕ್ಕೆ ರಫ್ತು ಮಾಡುವಾಗ ತೊಂದರೆ ಎದುರಿಸುತ್ತಿದ್ದಾರೆ. ಕಡಲೆ, ಒಣಗಿದ ಬೀನ್ಸ್ ಮತ್ತು ಬಟಾಣಿಗಳನ್ನು ಭಾರತೀಯರು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಭಾರತ ಗಣನೀಯ ಸುಂಕವನ್ನು ವಿಧಿಸಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ಅಮೆರಿಕದ ಉತ್ತರ ಡಕೋಟಾ ಮತ್ತು ಮೊಂಟಾನಾ ರಾಜ್ಯದಲ್ಲಿ ಬಟಾಣಿ ಮತ್ತು ದ್ವಿದಳ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಭಾರತವು ವಿಶ್ವದ ಅತಿದೊಡ್ಡ ದ್ವಿದಳ ಧಾನ್ಯಗಳ ಗ್ರಾಹಕ ರಾಷ್ಟ್ರವಾಗಿದ್ದು, ಜಾಗತಿಕ ಬಳಕೆಯ ಪೈಕಿ ಸುಮಾರು 27% ರಷ್ಟು ಭಾರತದಲ್ಲೇ ಬಳಕೆಯಾಗುತ್ತದೆ. ಅಮೇರಿಕಾದ ಬಟಾಣಿಗಳಿಗೆ ಭಾರತ ದೊಡ್ಡ ಗ್ರಾಹಕನಾಗಿರುವುದರಿಂದ ಸುಂಕ ಹೇರಿಕೆಯಿಂದ ಪೆಟ್ಟು ಬಿದ್ದಿದೆ.
Following the US decision to impose a 50% tariff on Indian products, India has quietly imposed import duties of up to 30% on US pulses. The move has drawn strong criticism from US Senators Kevin Cramer and Steve Daines, who wrote to President Donald Trump calling the tariff unfair and urging its removal, citing heavy losses to American pulse farmers.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm