ಬ್ರೇಕಿಂಗ್ ನ್ಯೂಸ್
31-12-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಪಾಕಿಸ್ತಾನದಲ್ಲಿ ಹಿಂದುಗಳ ದೇವಸ್ಥಾನ ಒಂದನ್ನು ಮುಸ್ಲಿಂ ಮೂಲಭೂತವಾದಿಗಳು ಬೆಂಕಿ ಕೊಟ್ಟು ಕೆಡವಿ ಹಾಕಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ.
ಮೂಲಭೂತವಾದಿ ಸಂಘಟನೆ ಜಾಮಿಯತ್ ಉಲೇಮಾ ಇ- ಇಸ್ಲಾಮಿ ಪಾರ್ಟಿಯ ನಾಯಕ ರೆಹಮತ್ ಸಲಾಮ್ ಖಟ್ಟಕ್ ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಖ್ತುಂಖ್ವಾ ಪ್ರಾಂತ್ಯದ ಕರಾಕ್ ಜಿಲ್ಲೆಯ ಟೆರ್ರಿ ಎನ್ನುವ ಗ್ರಾಮದಲ್ಲಿ ದೇವಸ್ಥಾನವನ್ನು ತಂಡವೊಂದು ಪುಡಿಗಟ್ಟಿದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ದೇವಸ್ಥಾನದ ಆವರಣ ಗೋಡೆಯನ್ನು ನವೀಕರಣ ಮಾಡುತ್ತಿರುವುದನ್ನು ವಿರೋಧಿಸಿದ ಉದ್ರಿಕ್ತ ಗುಂಪು, ಹಳೆಯ ದೇವಸ್ಥಾನ ಕಟ್ಟಡವನ್ನೇ ಕೆಡವಿ ಹಾಕಿದೆ.
ಘಟನೆ ಬಗ್ಗೆ ಮಾನವ ಹಕ್ಕು ಸಂಘಟನೆ ಮತ್ತು ಅಲ್ಪಸಂಖ್ಯಾತ ಹಿಂದು ಸಮುದಾಯದ ನಾಯಕರಿಂದ ಆಕ್ರೋಶ ಕೇಳಿಬಂದಿದೆ. ಪೇಶಾವರದ ಹಿಂದು ಸಮುದಾಯದ ನಾಯಕ ಹರೂನ್ ಸರಾಬ್ ದಿಯಾಳ್ ಹೇಳಿಕೆ ನೀಡಿ, ದೇವಸ್ಥಾನದ ಆವರಣದಲ್ಲಿ ಹಿಂದು ಸಂತರೊಬ್ಬರ ಸಮಾಧಿ ಇತ್ತು. ದೇಶಾದ್ಯಂತದ ಹಿಂದು ಬಂಧುಗಳು ಅಲ್ಲಿಗೆ ಭೇಟಿ ನೀಡುತ್ತಿದ್ದರು. ಇಂಥ ಸಮಾಧಿಯನ್ನೂ ಕೆಡವಿ ಹಾಕಿದ್ದಾರೆ. ಇದು ಹಿಂದು ಸಮುದಾಯದ ಭಾವನೆಯನ್ನು ಘಾಸಿಗೊಳಿಸಿದೆ. ಪಾಕಿಸ್ಥಾನ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ 75 ಲಕ್ಷ ಹಿಂದುಗಳಿದ್ದಾರೆಂದು ಅಲ್ಲಿನ ಅಧಿಕೃತ ಅಂಕಿಅಂಶಗಳು ಹೇಳುತ್ತವೆ. ಆದರೆ, ಅಲ್ಲಿನ ಹಿಂದು ಸಮುದಾಯ 90 ಲಕ್ಷ ಇದ್ದೇವೆ ಎಂದು ಹೇಳುತ್ತಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಹಿಂದುಗಳಿದ್ದಾರೆ. ಹೀಗಾಗಿ ಇತರೇ ಪ್ರಾಂತ್ಯಗಳಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇಗುಲ ಧ್ವಂಸ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.
Pakistani police have arrested over 30 people, most of them belonging to a radical Islamist party, after a Hindu temple was vandalised and set on fire by a mob protesting its renovation in northwest Pakistan.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm