ಬ್ರೇಕಿಂಗ್ ನ್ಯೂಸ್
08-02-26 10:18 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು ದೇಶದಲ್ಲಿ ಜಾರಿಗೆ ತರಬೇಕು ವಿನಾ ಅದು ಮತ್ತೆ ವಿಭಜನೆಗೆ ಕಾರಣವಾಗಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ RSSಗೆ ಅಚ್ಛೇ ದಿನ್’ (ಒಳ್ಳೆಯ ದಿನಗಳು) ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, “ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅವರದ್ದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೆವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದಷ್ಟೇ ಉತ್ತರಿಸಿದರು.
ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ ಆರ್ಎಸ್ಎಸ್ಗೆ 'ಅಚ್ಛೇ ದಿನ್' ಬಂದಿದೆ. ಅಗತ್ಯವಿದ್ದಾಗ ಆರ್ಎಸ್ಎಸ್ ಸಲಹೆ ನೀಡುತ್ತದೆ. ಅವರು ನಮ್ಮೊಳಗಿಂದ ಬಂದವರಾಗಿರುವುದರಿಂದ ಅವರ ಪಾಪಗಳು ನಮ್ಮ ಮೇಲೆ ಹೊರಿಸಲ್ಪಡುತ್ತವೆ. ರಾಜಕೀಯ ಒತ್ತಡವು ಮತದಾರರಿಂದ ಬರುತ್ತದೆಯೇ ಹೊರತು ಆರ್ಎಸ್ಎಸ್ನಿಂದಲ್ಲ ಎಂದು ಹೇಳಿದರು.
100 ವರ್ಷಗಳಲ್ಲಿ ಕಮ್ಯುನಿಸ್ಟರ ನೆಲೆ ಏಕೆ ಬೆಳೆದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, ಒಂದು ವೇಳೆ ಕೇಳಿದರೆ ಅವರಿಗೂ ಆರ್ ಎಸ್ ಎಸ್ ಮಾರ್ಗದರ್ಶನ ನೀಡಬಹುದು. ಆರ್ಎಸ್ಎಸ್ ಯುವ ಸಂಘಟನೆಯಾಗಿದ್ದು, ಸರಾಸರಿ ವಯಸ್ಸು 28. ಅದನ್ನು 25ಕ್ಕೆ ಇಳಿಸಲು ಬಯಸಿರುವುದಾಗಿ ಎಂದು ಅವರು ಹೇಳಿದರು.
ಹಿಂದುತ್ವ ಸಿದ್ಧಾಂತವಾದಿ ವಿ.ಡಿ ಸಾವರ್ಕರ್ಗೆ ಭಾರತ ರತ್ನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಭಾಗವತ್, ಅವರಿಗೆ ಪ್ರಶಸ್ತಿ ನೀಡಿದರೆ ಅದರ ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು. ಆರ್ಎಸ್ಎಸ್ ಶತಮಾನೋತ್ಸವ ಅಂಗವಾಗಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡಿದರು. ನಟಿಯರಾದ ರವೀನಾ ಟಂಡನ್, ಅನನ್ಯಾ ಪಾಂಡೆ, ನಟ ವಿಕ್ಕಿ ಕೌಶಲ್, ಚಲನಚಿತ್ರ ನಿರ್ಮಾಪಕರಾದ ಕರಣ್ ಜೋಹರ್, ಮಧುರ್ ಭಂಡಾರ್ಕರ್, ರಮೇಶ್ ತೌರಾನಿ, ಸಂಗೀತಗಾರ ಪಂಡಿತ್ ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಹಲವು ಪ್ರಮುಖರು ಸಂವಾದದಲ್ಲಿ ಉಪಸ್ಥಿತರಿದ್ದರು.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆ ರೂಪಿಸಬೇಕು. ಅದು ವಿಭಜನೆಗಳನ್ನು ಸೃಷ್ಟಿಸಬಾರದು. ಉತ್ತರಾಖಂಡದಲ್ಲಿ ಮೂರು ಲಕ್ಷ ಸಲಹೆಗಳನ್ನು ನೀಡಲಾಯಿತು. ಸಂಬಂದಪಟ್ಟ ಎಲ್ಲರೊಂದಿಗೆ ಮಾತನಾಡಿ, ಕಾಯ್ದೆ ಅಂಗೀಕರಿಸಲಾಯಿತು ಎಂದು ಅವರು ಉಲ್ಲೇಖಿಸಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮೋಹನ್ ಭಾಗವತ್, ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯ ಎಂಬುದು ಇಲ್ಲ. 'ನಾವೆಲ್ಲರೂ ಒಂದೇ ಸಮಾಜ. ಈ ದೇಶದಲ್ಲಿರುವ ಎಲ್ಲರೂ ಹಿಂದುಗಳೇ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳೊಂದಿಗೆ ವಿಶ್ವಾಸ, ಸ್ನೇಹ ಮತ್ತು ಸಂವಾದದ ಅಗತ್ಯವನ್ನು ಅವರು ಒತ್ತಿ ಹೇಳಿದರು. ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯುತ್ತಾರೆ, ಆದರೆ ಅಲ್ಲಿ ಶಾಂತಿ ಕಾಣುತ್ತಿಲ್ಲ. ಧರ್ಮದಲ್ಲಿ ಆಧ್ಯಾತ್ಮಿಕತೆ ಇಲ್ಲದಿದ್ದರೆ, ಅದು ಆಕ್ರಮಣಕಾರಿಯಾಗುತ್ತದೆ. ಇಂದು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದಲ್ಲಿ ಕಾಣುತ್ತಿರುವುದು ಯೇಸುಕ್ರಿಸ್ತ ಮತ್ತು ಪ್ರವಾದಿ ಮುಹಮ್ಮದ್ ಅವರ ಬೋಧನೆಗಳಲ್ಲ, ನಮಗೆ ನಿಜವಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಆಚರಣೆ ಅಗತ್ಯವಿದೆ ಎಂದು ಹೇಳಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm