ಬ್ರೇಕಿಂಗ್ ನ್ಯೂಸ್
09-02-26 10:25 pm HK News Desk ದೇಶ - ವಿದೇಶ
ಟೊರೊಂಟೋ, ಫೆ.9 : ಕೆನಡಾದ ಟೊರೊಂಟೋ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ (37) ಮೃತಪಟ್ಟವರು. ಕಳೆದ ಆರೇಳು ವರ್ಷಗಳಿಂದ ಉದ್ಯೋಗ ನಿಮಿತ್ತ ಕೆನಡಾದಲ್ಲಿ ನೆಲೆಸಿದ್ದು ಗ್ರೇಟರ್ ಟೊರೊಂಟೋದ ಬ್ರಾಂಪ್ಟನ್ ಪ್ರದೇಶದಲ್ಲಿ ವಾಸಿಸುತ್ತಿದ್ದರು.
ಟೊರೊಂಟೋ ಪೊಲೀಸರ ಮಾಹಿತಿ ಪ್ರಕಾರ, ಫೆಬ್ರವರಿ 7 ರಂದು ಮಧ್ಯಾಹ್ನ 3:31ರ ಸುಮಾರಿಗೆ ರೆಕ್ಸ್‌ಡೇಲ್ ಬೌಲೆವಾರ್ಡ್ ಮತ್ತು ಹೆದ್ದಾರಿ 27 ಸಮೀಪದ ವುಡ್‌ಬೈನ್ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಚಂದನ್ ಕುಮಾರ್ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಅಪರಿಚಿತರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಕಾರಿನ ಚಾಲಕನ ಬದಿಯಲ್ಲಿ ಸುಮಾರು ಹತ್ತು ಗುಂಡುಗಳು ತಗುಲಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಗುಂಡಿನ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಚಂದನ್ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಾಳಿ ಆಕಸ್ಮಿಕವಲ್ಲ. ಬದಲಾಗಿ ಮೊದಲೇ ಯೋಜನೆ ರೂಪಿಸಿಕೊಂಡು ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ ದಾಳಿಯ ಉದ್ದೇಶ ಹಾಗೂ ಶಂಕಿತರ ಕುರಿತು ಇನ್ನೂ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ದಾಳಿ ಘಟನೆ ಟೊರಾಂಟೋ ನಗರದಲ್ಲಿ ಈ ವರ್ಷ ನಡೆದ ಮೂರನೇ ಗುಂಡಿನ ದಾಳಿ ಮತ್ತು ಹತ್ಯೆಯಾಗಿದೆ.
ಚಂದನ್ ಕುಮಾರ್ ಅವರ ತಂದೆ ನಂದಕುಮಾರ್ ನಿವೃತ್ತ ಶಿಕ್ಷಕರಾಗಿದ್ದಾರೆ. ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ ಚಂದನ್ ಕುಮಾರ್ ನಂತರ ಐಟಿ ವೃತ್ತಿಪರರಾಗಿ ಕೆಲಸ ಮಾಡುತ್ತಿದ್ದರು. ಲಾರ್ಸನ್ & ಟೂಬ್ರೊ ಇನ್ಫೋಟೆಕ್‌ನ ಕೆನಡಾ ಅಂಗಸಂಸ್ಥೆಯಾದ ಎಲ್‌ಟಿಐ ಮೈಂಡ್ ಟ್ರೀಯಲ್ಲಿ ಉದ್ಯೋಗದಲ್ಲಿದ್ದರು. ಸಾಮಾಜಿಕ ಜೀವನದಲ್ಲಿ ಸಕ್ರಿಯರಾಗಿದ್ದ ಚಂದನ್ ಕುಮಾರ್, ಟೊರೊಂಟೋ ಕನ್ನಡ ಸಂಘದ ಸಾಮಾಜಿಕ ಮಾಧ್ಯಮ ಸಂಯೋಜಕರಾಗಿ ಮತ್ತು ವಿಶ್ವ ಆರ್ಯ ವೈಶ್ಯ ಮಹಾಸಭಾ–ಕೆನಡಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೆನಡಾದಲ್ಲಿನ ಕನ್ನಡಿಗರಿಗೆ ಸಹಾಯ ಮಾಡುವಲ್ಲಿ ಅವರು ಮುಂಚೂಣಿಯಲ್ಲಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಗನ ಸಾವಿನ ಸುದ್ದಿಯನ್ನು ಭಾನುವಾರ ರಾತ್ರಿ ಕೆನಡಾ ಪೊಲೀಸರು ದೂರವಾಣಿ ಮೂಲಕ ನೀಡಿದ್ದು, ಮಗನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದ ಒಬ್ಬನೇ ಮಗನನ್ನ ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ಮಗನನ್ನು ಕಳೆದುಕೊಂಡು ತಂದೆ ಕಣ್ಣೀರು ಹಾಕಿದ್ದು, ಮದುವೆ ಮಾಡಿಕೊಳ್ಳುವಂತೆ ನಾವು ಹೇಳ್ತಾ ಇದ್ದೆವು. ಮದುವೆ ಮಾಡಿಕೊಂಡಿದ್ದರೆ ಆತ ಭಾರತದಲ್ಲಿಯೇ ಇರುತ್ತಿದ್ದ. ಅಮೆರಿಕದಲ್ಲಿ ಕೆಲಸ ಮಾಡಲು ಪ್ರಯತ್ನ ಮಾಡಿದ್ದ. ಆದರೆ ಅವಕಾಶ ಸಿಕ್ಕಿರಲಿಲ್ಲ. ಆತ ನಮಗೆ ಒಬ್ಬನೇ ಮಗ. ಮಗನ ಪ್ರಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ, ಆತನ ಜನ್ಮಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಬೇಕು ಎಂದಿದ್ದಾರೆ.
Chandan Kumar (37), a native of Nelamangala near Bengaluru, was shot dead in Toronto, Canada, in a suspected targeted attack. The IT professional was living in Brampton for the past several years. His grieving parents, who lost their only son, have appealed to authorities to help bring his mortal remains back to India for the final rites.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am