ಬ್ರೇಕಿಂಗ್ ನ್ಯೂಸ್
20-02-26 08:45 pm HK News Desk ದೇಶ - ವಿದೇಶ
ನವದೆಹಲಿ, ಫೆ.20: ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ - 2026 ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಅಲ್ಲಿ ಸೇರಿದ್ದ ಸಾರ್ವಜನಿಕರು ಕಾಂಗ್ರೆಸ್ ಕಾರ್ಯಕರ್ತರನ್ನು ಕಾಲಿನಲ್ಲಿ ಒದ್ದು ಹೊರಕ್ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 19ರಿಂದ 21ರ ವರೆಗೆ AI ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು 10 ಮಂದಿಯಷ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ನುಗ್ಗಿ ತಮ್ಮ ಶರ್ಟ್ಗಳನ್ನು ತೆಗೆದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಯುಎಸ್ ಒಪ್ಪಂದದ ಮೂಲಕ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಯಿಂದ ಹೌಹಾರಿದ ಅಲ್ಲಿ ಸೇರಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು, ಅಟ್ಟಾಟಿಸಿ ಭಾರತ್ ಮಂಟಪದ ಆವರಣದಿಂದ ಹೊರಕ್ಕಟ್ಟಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರ್ಯಕರ್ತರ ದಿಢೀರ್ ಪ್ರತಿಭಟನೆ ಶೃಂಗಸಭೆಯಲ್ಲಿ ಭದ್ರತಾ ಲೋಪಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರು QR-ಕೋಡ್ ಇದ್ದ ಪಾಸ್ಗಳನ್ನು ಪಡೆದು ಒಳಕ್ಕೆ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ನಾಲ್ಕು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಾಲಿಗೆ ಎಐ ಸಮಿಟ್ ಅಂದ್ರೆ ಏಂಟಿ ಇಂಡಿಯಾ ಎನ್ನುವಂತಾಗಿದೆ ಎಂದು ಟೀಕೆ ಮಾಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am