ಬ್ರೇಕಿಂಗ್ ನ್ಯೂಸ್
22-02-26 06:19 pm HK News Desk ದೇಶ - ವಿದೇಶ
ನವದೆಹಲಿ, ಫೆ.22: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ಐಎಸ್ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿದ್ದುದಲ್ಲದೆ, ಉಗ್ರ ಸಂಘಟನೆಗಳನ್ನು ಬೆಂಬಲಿಸುವ 'ಫ್ರೀ ಕಾಶ್ಮೀರ'ದಂತಹ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ, ಇವರ ಬಳಿಯಿದ್ದ 8 ಫೋನ್ ಸೇರಿದಂತೆ 16 ಸಿಮ್ ಗಳನ್ನು ವಶಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಆರು ಮಂದಿ ಹಾಗು ಇಬ್ಬರು ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೀಡಾಗಿದ್ದಾರೆ. ಆರು ಮಂದಿ ಶಂಕಿತ ಉಗ್ರರು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಂಧಿತರನ್ನು ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿತನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾಗಿದೆ.
ಉಳಿದ ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಲ್ಲಿ ಕೆಲವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ತಮ್ಮ ಗುರುತನ್ನು ಮರೆಮಾಚಲು ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸುತ್ತಿದ್ದರು ಎಂದು ತಿಳಿದುಬಂದಿದೆ. ಇವರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳನ್ನು ಬೆಂಬಲಿಸುವಂತಹ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದರು ಎಂಬ ವಿಚಾರ ತಿಳಿದುಬಂದಿದೆ. ಇವರ ಬಳಿ ಇದ್ದ 8 ಫೋನ್ ಗಳನ್ನು ಹಾಗೂ 16 ಸಿಮ್ ಕಾರ್ಡ್ ಗಳನ್ನು ವಶ ಪಡಿಸಲಾಗಿದೆ ಎಂದು ದೆಹಲಿಯ ವಿಶೇಷ ಘಟಕ ತಿಳಿಸಿದೆ.
ದೇಶದ ವಿವಿಧ ಕಡೆಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಇವರು ನೆಟ್ ವರ್ಕ್ ಮಾಡುತ್ತಿದ್ದರು. ಇತ್ತೀಚೆಗೆ ದೆಹಲಿ ಮೆಟ್ರೋ ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವೆಡೆ ಪ್ರಚೋದನಕಾರಿ ಪೋಸ್ಟರ್ ಕಾಣಿಸಿಕೊಂಡ ನಂತರ ಈ ಜಾಲದ ಮಾಹಿತಿ ಸಿಕ್ಕಿತ್ತು. ಇವರು ʼಫ್ರೀ ಕಾಶ್ಮೀರʼ ಪೋಸ್ಟ್ ಗಳನ್ನು ಹಂಚಿಕೊಂಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು. ಹೆಚ್ಚಿನ ತನಿಖೆ ನಡೆಯಲಿದ್ದು, ಇವರೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಇವರಿಗೆ ದೊರಕುತ್ತಿದ್ದ ಆರ್ಥಿಕ ಸಹಾಯ ಹಾಗೂ ಸಂಪರ್ಕಗಳು ಎಲ್ಲಿಯವು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am