ಬ್ರೇಕಿಂಗ್ ನ್ಯೂಸ್
24-02-26 01:21 pm HK News Desk ದೇಶ - ವಿದೇಶ
ಟೆಹ್ರಾನ್, ಫೆ.24: ಇರಾನ್‌ನಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಮೆರಿಕ ದಾಳಿ ಭೀತಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ನಿಗೂಢ ಸ್ಥಳಕ್ಕೆ ತೆರಳಿ ಅಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ, ಭಾರತೀಯ ಪ್ರಜೆಗಳನ್ನು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಲಭ್ಯವಿರುವ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.
ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟು ಭಾರತ ಸರ್ಕಾರ ಜ.5 ರಂದು ಇದೇ ರೀತಿಯ ಸಲಹೆಗಳನ್ನು ನೀಡಿತ್ತು. ಈಗ ಮತ್ತೆ ಅದೇ ರೀತಿಯ ವಾತಾವರಣ ಎದುರಾಗಿದ್ದು ಎಲ್ಲಾ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.
ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್‌ಪೋರ್ಟ್, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್‌ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಪ್ರತಿಭಟನೆಗಳು ನಡೆಯುತ್ತಿರುವ ಕಾರಣ, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.
ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
ಇದೇ ವೇಳೆ, ಅಮೆರಿಕ ಪ್ರತಿನಿಧಿಗಳು ಇರಾನ್ ಜೊತೆಗೆ ನ್ಯೂಕ್ಲಿಯರ್ ಒಪ್ಪಂದ ವಿಚಾರದಲ್ಲಿ ಒತ್ತಡ ಹೇರುತ್ತಿದ್ದಾರೆ. ಇರಾನ್ ನ್ಯೂಕ್ಲಿಯರ್ ವಿಚಾರದಲ್ಲಿ ಬಗ್ಗದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದಕ್ಕಾಗಿ ಮಧ್ಯ ಪ್ರಾಚ್ಯದ ಸೇನಾ ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು, ಮಿಲಿಟರಿಯನ್ನು ಸಜ್ಜುಗೊಳಿಸಿದೆ. ಯಾವುದೇ ಕ್ಷಣದಲ್ಲಿ ದಾಳಿ ಆಗಬಹುದೆಂದು ಎಚ್ಚರಿಕೆ ರವಾನಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm