ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್‌ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್‌ಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm