ಮುನ್ನಾರ್‌ನಲ್ಲಿ ಭೂಕುಸಿತ ; ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆ

11-08-20 12:07 pm       Headline Karnataka News Network   ದೇಶ - ವಿದೇಶ

ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಸ್ಥಳದಲ್ಲಿ ಮಂಗಳವಾರ ಮತ್ತೆ ಮೂವರ ಮೃತದೇಹಗಳನ್ನು ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಗಿದೆ.

ರುವನಂತಪುರಂ, ಆಗಸ್ಟ್.11: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಸ್ಥಳದಲ್ಲಿ ಮಂಗಳವಾರ ಮತ್ತೆ ಮೂವರ ಮೃತದೇಹಗಳನ್ನು ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಗಿದೆ.

ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಡುಕ್ಕಿಯ ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಪಡೆಯು ಕಾರ್ಯಾಚರಣೆ ನಡೆಸುತ್ತಿವೆ. ಕೊಟ್ಟಾಯಂ, ತಿರುವನಂತಪುರಂನಿಂದ ಒಂದೊಂದು ರಕ್ಷಣಾ ಪಡೆಯನ್ನು ರಾಜಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡಾ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭೂಕುಸಿತದಲ್ಲಿ ಪ್ರಾಣಬಿಟ್ಟ ಪ್ರತಿಯೊಬ್ಬರಿಗೂ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ.